ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರೊ.ಬಿ. ಕೃಷ್ಣರವರು ಹೋರಾಟದ ಬೀಜ ಬಿತ್ತಿದ್ದಾರೆ : ಹೆಚ್.ಗುಂಡಪ್ಪ

ದೇವಲಾಪುರ ಗ್ರಾಮ ಘಟಕದ ನೂತನ ಸಂಚಾಲಕರಾಗಿ ಪರಶುರಾಮ ಆಯ್ಕೆ

ಬಳ್ಳಾರಿ / ಕಂಪ್ಲಿ : ಭದ್ರಾವತಿಯ ಪ್ರೊ.ಬಿ.ಕೃಷ್ಣಪ್ಪರವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕುವ ಮೂಲಕ ಕರ್ನಾಟಕದ ಅಸಂಘಟಿತ ಶೋಷಿತ ದಲಿತ ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿ ಹೋರಾಟದ ಬೀಜವನ್ನು ಬಿತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯ ತಾಲೂಕು ಸಂಚಾಲಕ ಹೆಚ್.ಗುಂಡಪ್ಪ ಹೇಳಿದರು.
ಅವರು ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಸಂಘಟನಾ ಸಭೆ ಹಾಗೂ ದೇವಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವು ಹೋರಾಟಗಳ ಮೂಲಕ ದಲಿತ ಸಮುದಾಯಗಳಲ್ಲಿ ಸ್ವಾಭಿಮಾನ ಹಾಗೂ ಪ್ರಶ್ನಿಸುವ ಮನೋಭಾವವನ್ನು ಮೂಡಿಸಿತು. ಸಂಘಟನೆಯ ಪದಾಧಿಕಾರಿಗಳು ತಮ್ಮ ನೈಜ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಅರಿತು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪರವರ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ನಂತರ ತಾಲೂಕು ಸಂಘಟನಾ ಸಂಚಾಲಕ ಹೆಚ್.ಮರಿಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯೂ ಬೆಳೆದು ಬಂದ ಹಾದಿ ತಿಳಿಸುವ ಜೊತೆಗೆ ಸಂಘಟನೆಯ ತತ್ವ ಸಿದ್ಧಾಂತಗಳೊಂದಿಗೆ ಶಿಕ್ಷಣ, ಸಂಘಟನೆ, ಹೋರಾಟದ ಜೊತೆಗೆ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಜನತೆರಿಗೂ ತಲುಪಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಹುಲುಗಪ್ಪ, ಲಕ್ಷ್ಮಣ ಸೇರಿದಂತೆ ಇತರರು ಇದ್ದರು.

ಆಯ್ಕೆ: ದೇವಲಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗ್ರಾಮ ಘಟಕದ ಸಂಚಾಲಕರಾಗಿ ಪರಶುರಾಮ, ಸಂಘಟನಾ ಸಂಚಾಲಕರಾಗಿ ಹೆಚ್.ತಿಪ್ಪೇಶ, ಶಿವರಾಜ, ಮಾರುತಿ, ಖಜಾಂಚಿಯಾಗಿ ಹೆಚ್.ಹನುಮಂತ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಾಜಾ, ಪರಶುರಾಮ, ಹಿಮಂತರಾಜ, ಹೆಚ್.ವಿನೋದ, ಅಶೋಕ, ಅಭಿಷೇಕ, ಯಲ್ಲಪ್ಪ, ದುರುಗೇಶ, ಉಮೇಶ, ಹಿರಿಯ ಸಲಹೆಗಾರರಾಗಿ ಹೆಚ್.ನಾಗರಾಜ, ವಿರೇಶ, ರವಿ ಆಯ್ಕೆಗೊಂಡರು. ನಂತರ ನೂತನ ಪದಾಧಿಕಾರಿಗಳಿಗೆ ಮಾಲಾರ್ಪಣೆಯೊಂದಿಗೆ ಗೌರವಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!