ಕೊಪ್ಪಳ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಪ್ಪಳ ಜಿಲ್ಲೆಗೆ ಪ.ಜಾ-4, ಪ.ಪಂ-3ಅಭ್ಯರ್ಥಿಗಳು ಸೇರಿ ಒಟ್ಟು 7 ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ತರಬೇತಿಯನ್ನು ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
20 ರಿಂದ 55 ವರ್ಷ ವಯೋಮಿತಿ, ಅರ್ಜಿ ಸಲ್ಲಿಸಲು ಮಾರ್ಚ್ 13 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಉಚಿತವಾಗಿ ಕಛೇರಿಯ ವೇಳೆಯಲ್ಲಿ ಪಡೆಯತಕ್ಕದ್ದು.
ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಕಛೇರಿ ಹಾಗೂ ದೂರವಾಣಿ ಸಂಖ್ಯೆ: 08539-225566ಗೆ ಸಂಪರ್ಕಿಸಿ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















