ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಚಾರಕ್ಕಷ್ಟೇ ಪಟ್ಟಾ : ವೀರಸಂಗಯ್ಯ

ರೈತರ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್‌ ಸಹಿತ ಹಲವು ಜಿಲ್ಲೆಗಳ ಮುಖಂಡರು ಪಾಲ್ಗೊಳ್ಳುವರು. ಪ್ರಿಪೇಯ್ಡ್‌ ಮೀಟರ್‌ನಿಂದ ರೈತರಿಗೆ, ಜನಸಾಮಾನ್ಯರಿಗೆ ಎದುರಾಗುವ ಕಷ್ಟಗಳ ಕುರಿತು ಚರ್ಚೆ ನಡೆಯಲಿದೆ ಎಂದು ವೀರಸಂಗಯ್ಯ ಹೇಳಿದರು.

ಪ್ರಚಾರಕ್ಕಷ್ಟೇ ಪಟ್ಟಾ: ರೈತರಿಗೆ ಪಟ್ಟಾ ನೀಡುವುದಾಗಿ ಸರ್ಕಾರ ಹೇಳಿ ಪ್ರಚಾರ ಪಡೆದುಕೊಳ್ಳುತ್ತಿದೆ, ಆದರೆ ವಾಸ್ತವದಲ್ಲಿ ಪಟ್ಟಾ ಸಿಗದಂತೆ ಮಾಡಲು ಹಲವು ಷರತ್ತುಗಳನ್ನು ವಿಧಿಸಲಾಗಿದೆ. ‘ನಮ್ಮ ಹೊಲ ನಮ್ಮ ದಾರಿ’ ವಿಷಯದಲ್ಲೂ ದಾರಿ ಸಿಗಲು ಮ್ಯಾಪ್‌ ಕಡ್ಡಾಯಗೊಳಿಸಲಾಗಿದೆ. ಇದರಿಂದ ದಾರಿ ಸಿಗಲು ಸಾಧ್ಯವೇ ಇಲ್ಲದ ಸ್ಥಿತಿ ಇದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ 45 ಲಕ್ಷ ಪಂಪ್‌ಸೆಟ್‌ಗಳಿದ್ದು, ಇದುವರೆಗೆ 10 ಎಚ್‌ಪಿಗಿಂತ ಕಡಿಮೆ ಸಾಮರ್ಥ್ಯದ ನೀರಾವರಿ ಪಂಪ್‌ಗಳಿಗೆ ವಿದ್ಯುತ್ ಸಬ್ಸಿಡಿ ಇತ್ತು. ಇನ್ನು ಮುಂದೆ ಅದೆಲ್ಲಾ ಇರುವುದಿಲ್ಲ. ನೂತನ ವಿದ್ಯುತ್ ನೀತಿಯನ್ನು ಕೇರಳ ಸರ್ಕಾರ ಮಾತ್ರ ಅಧಿಕೃತವಾಗಿ ವಿರೋಧಿಸಿದೆ. ರಾಜ್ಯದಲ್ಲಿ ಮೂರು ತಿಂಗಳಿಂದ ಕಾಯ್ದೆ ಜಾರಿಗೆ ತರುವ ಪ್ರಯತ್ನ ನಡೆದಿದೆ. ರೈತರು, ಜನಸಾಮಾನ್ಯರು ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಬಹಳ ದೊಡ್ಡ ಅಪಾಯ ನಿಶ್ಚಿತ ಎಂದು ಎಚ್ಚರಿಸಿದ ವೀರಸಂಗಯ್ಯ, ತಾವು ಸಂಪಾದಿಸಿರುವ ಪುಸ್ತಕವನ್ನು 45 ಲಕ್ಷ ರೈತ ಕುಟುಂಬಗಳಿಗೂ ತಲುಪಿಸಲಾಗುವುದು ಎಂದರು.

ವಿವಿಧ ಕ್ಷೇತ್ರಗಳ ಮುಖಂಡರಾದ ಪೀರ್‌ಪಾಷಾ, ಬಣ್ಣದಮನೆ ಸೋಮಶೇಖರ್‌, ವಿಶಾಲ ಮ್ಯಾಸರ, ಜಂಬುನಾಥ, ಗಂಟೆ ಸೋಮಶೇಖರ್, ರವಿಕುಮಾರ್ ತಂಬ್ರಹಳ್ಳಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!