ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ನವಜೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025.26, ಸಾಲಿನಲ್ಲಿ ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.
ವಿಜಯನಗರ ಹೊಸಪೇಟೆ ತಾಲೂಕಿನ ಶ್ರೀ ಅಕ್ಷಯ ಪದವಿ ಪೂರ್ವ ಕಾಲೇಜ್ ಹೊಸಪೇಟೆಯ ವಿದ್ಯಾರ್ಥಿಗಳಾದ ಶ್ರೀ ಪರಶುರಾಮ್. ನಸ್ರೀನ್ .ಕೀರ್ತಿ. ವಾಣಿ ಕನ್ನಡ ರತ್ನಪ್ರಶಸ್ತಿ ಭಾಜನರಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಅನೂಪ್ ಅಗ್ರವಾಲ ಮತ್ತು ಕನ್ನಡ ಉಪನ್ಯಾಸಕರಾದ ಶ್ರೀ ವೆಂಕಟೇಶ ಬಡಿಗೇರ್ ಪ್ರೀತಿಪೂರ್ವಕವಾಗಿ ಅಭಿನಂದಿಸಿ ಶುಭ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.



















