ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲಮಂಗಿ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನದ ಅಧ್ಯಯನ ಇರಲಿ : ಪಿಡಿಒ ಹುಚ್ಚಪ್ಪ ನೇಗಲಿ

ಸಿಂಧನೂರು : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನುಗ್ಗಬೇಕಾದರೆ ಪಠ್ಯ ಪುಸ್ತಕಗಳ ಜ್ಞಾನದ ಜೊತೆಗೆ ಸಾಮಾನ್ಯ ಜ್ಞಾನದ ಅಧ್ಯಯನವೂ ಇರಬೇಕು ಎಂದು ಕಲಮಂಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುಚ್ಚಪ್ಪ ನೇಗಲಿ ಹೇಳಿದರು.
ಅವರು ಸೋಮವಾರದಂದು ತಾಲೂಕಿನ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವೃತಿ ಮಾರ್ಗದರ್ಶನ ಕಾರ್ಯಕ್ರಮದಡಿ ‘ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ’ ಚಟುವಟಿಕೆ ಅಡಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ನಾವೂ ಕೆಜಿಯಿಂದ (ಪೂರ್ವ ಪ್ರಾಥಮಿಕ) ಪಿಜಿಯವರೆಗೆ ಕೆ.ಜಿಗಟ್ಟಲೇ ಅಂಕಪಟ್ಟಿಗಳಿರುತ್ತವೆ. ಅವೇನಿದ್ದರೂ ಕೇವಲ ಅರ್ಹತೆ ಮಾತ್ರ, ಆದರೆ ನಮ್ಮ ಬಳಿ ಸಾಮಾನ್ಯ ಜ್ಞಾನ, ಪ್ರಚಲಿತ ಜ್ಞಾನಗಳು ಇಲ್ಲದಿದ್ದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದೆ ಬರಲು ಆಗುವುದಿಲ್ಲ. ಸತತ ಅಧ್ಯಯನ ಮತ್ತು ಏಕಾಗ್ರತೆಯಿಂದ ನಾವು ಇಟ್ಟ ಗುರಿಗಳನ್ನು ಸಾಧಿಸಿಕೊಳ್ಳಬಹುದು. ಇದಕ್ಕಾಗಿ ಕ್ರಮಬದ್ಧವಾದ ಅಧ್ಯಯನ, ಮನನ ಮಾಡಿಕೊಳ್ಳುವಿಕೆ, ಓದಿದನ್ನು ಬರೆದಿಟ್ಟುಕೊಳ್ಳುವುದು, ಪುನರಾರ್ತನೆ ಹೀಗೆ ಶಿಸ್ತುಬದ್ಧವಾಗಿ ಅಭ್ಯಾಸವನ್ನು ಮಾಡಬೇಕು. ಖಂಡಿತ ಯಶಸ್ಸು ಸಾಧ್ಯವಾಗತ್ತದೆ. ವಿದ್ಯಾರ್ಥಿಗಳು ಮತ್ತು ಯುವಕರು ಮೊಬೈಲ್ ನಿಂದ ಹೊರಗೆ ಬರಬೇಕು. ಹೆಚ್ಚು ಹೆಚ್ಚು ಅಧ್ಯಯನಶೀಲರಾಗಬೇಕು. ಶಾಲೆಯಲ್ಲಿ ಶಿಕ್ಷಕರು ಕಲಿಸಿಕೊಟ್ಟ ಜ್ಞಾನದ ಜೊತೆಗೆ ಗುರುಗಳು, ತಂದೆ-ತಾಯಿ, ಸಮಾಜದಿಂದ ಒಳ್ಳೆಯ ಸಂಸ್ಕಾರಗಳನ್ನು ಕಲಿಯಬೇಕು ಎಂದು ಹೇಳುತ್ತಾ, ಗ್ರಾಮ ಪಂಚಾಯತಿ ಪಿಡಿಒ ಆಗಲು ಯಾವುದಾದರೂ ಪದವಿ ಪಡೆದಿರಬೇಕು. ಈ ಹುದ್ದೆಯನ್ನು ಗಳಿಸಿಕೊಳ್ಳಲು ಅಧ್ಯಯನಕ್ಕೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಪ್ರಜಾಪ್ರಭುತ್ವದಲ್ಲಿ ಸ್ಥಳಿಯ ಸರ್ಕಾರಗಳ ಮಹತ್ವ ಎಷ್ಟಿದೆ ಎಂದರೆ ಹುಟ್ಟಿನಿಂದ ಚಟ್ಟದವರೆಗೂ ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತವೆ ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಮಲ್ಲಪ್ಪ ಬಾದರ್ಲಿ ಮಾತನಾಡುತ್ತಾ, ನಾವು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ವೃತ್ತಿ ಮತ್ತು ಭವಿಷ್ಯದ ಬಗ್ಗೆ ಇಷ್ಟು ಮಾರ್ಗದರ್ಶನಗಳು ಇದ್ದಿಲ್ಲ. ಈಗಿನ ವಿದ್ಯಾರ್ಥಿಗಳಿಗೆ, ಶಿಕ್ಷಕರು, ಪೋಷಕರು, ಮಾಹಿತಿ ತಂತ್ರಜ್ಞಾನ, ವೃತ್ತಿ ಮಾರ್ಗದರ್ಶನದಂತಹ ಅನೇಕ ಕಾರ್ಯಕ್ರಮಗಳು ಇವೆ. ಇವುಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.
ಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕರಾದ ವೀರೇಶ ಗೋನವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಇಂದು ಜಗತ್ತು ತುಂಬಾ ವಿಶಾಲವಾಗಿದೆ. ಯಾವುದನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ಗೊಂದಲ ಇರುವುದು ಸಹಜ. ತಮಗೆ ಎಸ್.ಎಸ್.ಎಲ್.ಸಿ, ಪಿಯುಸಿ ನಂತರ ತಮಗೆ ಅತ್ಯಂತ ಇಷ್ಟವಾಗಿರುವ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವತ್ತ ಆಲೋಚಿಸಬೇಕು ಎಂದರು.

ವೇದಿಕೆಯ ಮೇಲೆ ಶಿಕ್ಷಕರಾದ ಶಿಕ್ಷಕ ರವಿಚಂದ್ರ, ಎಂ.ಮಾರುತಿ, ರೂಪಾ, ಬಸವರಾಜ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!