ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಕಾಶಪ್ಪನವರ

ಹುನಗುಂದ: ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ (ಸಿ.ಎಮ್ಐಡಿಪಿ) ಯೋಜನೆ ಅಡಿಯಲ್ಲಿ ಪಂಚಾಯತ ರಾಜ್ ಇಲಾಖೆಯಿಂದ ೮೦ ಲಕ್ಷ ರೂ. ಅನುದಾನದಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ತಿಪ್ಪವ್ವ ಭರಮಗೌಡರ ಹೊಲದವರಗೀನ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಶಾಸಕ ವಿಜಯಾನಂದ ಕಾಶಪ್ಪನವರ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ ನಮ್ಮ ಸರ್ಕಾರ ಗ್ರಾಮೀಣ ಪ್ರದೇಶದ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದು. ರೈತರು ತಮ್ಮ ಹೊಲಗಳಿಗೆ ಸುರಳಿತವಾಗಿ ಹೋಗಿ ಬರಲು ಅನುಕೂಲವಾಗಲಿ ಎಂದು ಈ ಸಿ. ಸಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕಾಮಗಾರಿ ನಿಗದಿತ ಅವಧಿಯಲ್ಲಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗಂಗಣ್ಣ ಬಾಗೇವಾಡಿ, ಭೀಮಪ್ಪ ಯರಝರಿ, ಮಹಾಂತೇಶ ಲಗ್ಮನ್ನವರ, ಚಂದ್ರಾಮಪ್ಪಗೌಡ ಭರಮಗೌಡರ, ಶ್ರೀಕಾಂತ ಹಿರೇಮಠ, ಎಸ್.ಎಸ್ ಪುರೋಹಿತ, ಮುತ್ತಣ್ಣ ಬರಮಗೌಡ, ಮಾನನಗೌಡ ಪಾಟೀಲ, ಸಂಗಪ್ಪ ಶಿರೂರ, ದ್ಯಾಮಣ್ಣ ವಡ್ಡರ, ಪಂಚಾಯತ್ ರಾಜ್ ಇಲಾಖೆಯ ಎಇಇ ಕೆ.ಡಿ.ನಾಯಕ, ಜೆಇ ಸೌಮ್ಯ ಭಾವಿಕಟ್ಟಿ, ಪಿಡಿಓ ಹನಮಂತ ವಕ್ರ,ಗುತ್ತಿಗೆದಾರರ ಶಂಕರ್ ಜಗ್ಗಲ ಸೇರಿದಂತೆ ಅನೇಕರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!