ಬಳ್ಳಾರಿ / ಕಂಪ್ಲಿ : ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಕಂಪ್ಲಿ ತಾಲೂಕು ವತಿಯಿಂದ ಲೈಂಗಿಕ ಕಿರುಕುಳ ತಡೆ ಕಾಯ್ದೆ, ಅರಿವು ಕಾರ್ಯಗಾರದ ಬಗ್ಗೆ ಮನವಿ ಸಲ್ಲಿಸಿದರೂ ಸಹ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಮುಂದಾದರೂ ಕಾರ್ಯಕ್ರಮವನ್ನು ಆಯೋಜಿಸಲು ಕಂಪ್ಲಿಯ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಹಶೀಲ್ದಾರರ ಮೂಲಕ ಮನವಿ ಪತ್ರವನ್ನು ಬುಧವಾರ ಇಲ್ಲಿನ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ತಹಶೀಲ್ದಾರ ಜೂಗಲ್ ಮಂಜುನಾಯಕ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿದ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಎಚ್.ಎಂ. ರಾಜಕುಮಾರ ಮಾತನಾಡಿ 2025 ರ ಡಿಸೆಂಬರ್ 1 ರಂದು ಮಡಿಕೇರಿ ಜಿಲ್ಲೆಯಲ್ಲಿ ನಡೆದಂತೆ ಲೈಂಗಿಕ ಕಿರುಕುಳ ತಡೆ ಕಾಯ್ದೆ ಅರಿವು ಕಾರ್ಯಗಾರದ ಬಗ್ಗೆ ಮನವಿ ಸಲ್ಲಿಸಿದರೂ ಸಹ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಮುಂದಾದರೂ ಕಾರ್ಯಕ್ರಮವನ್ನು ಆಯೋಜಿಸಲು ಕಂಪ್ಲಿಯ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನವನ್ನು ನೀಡಿ ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಸಮಾಜ ಸೇವಾ ವೇದಿಕೆಯ ತಾಲೂಕು ಅಧ್ಯಕ್ಷ ಎಂ. ಮರಿಯಪ್ಪ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ತಡೆ ಕಾಯ್ದೆ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಸಖಿ ಒನ್ ಸ್ಯಾನ್ ಸೆಂಟರ್ ಮತ್ತು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಂಪ್ಲಿಯಲ್ಲಿ ಕಾರ್ಯಾಗಾರ ನಡೆಸಬೇಕು, ಇದರಿಂದ ರಾಜ್ಯದ ಬೇರೆ-ಬೇರೆ ಜಿಲ್ಲೆ ಮತ್ತು ತಾಲೂಕುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ,
ಯಾಸಿಡ್ ದಾಳಿ, ಮಾರಕಾಸ್ತ್ರಗಳಿಂದ ಹಲ್ಲೆ, ಕೊಲೆ, ಸುಲಿಗೆ ಮಾಡುವ ಘಟನೆಗಳು ಆಗಬಾರದು ಎಂಬ ಉದ್ದೇಶದಿಂದ ನಮ್ಮ ವೇದಿಕೆಯಿಂದ ಈ ಮುಂಚೆ ಮನವಿ ಮಾಡಿಕೊಳ್ಳಲಾಗಿತ್ತು.
ಆದರೆ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ವಹಿಸಲಿಲ್ಲ, ಇದರಿಂದ ಕಂಪ್ಲಿ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಒಂದು ಅಹಿತಕರ ಘಟನೆ ಸಂಭವಿಸಿದ್ದು, ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕಾನೂನಿಗೆ ಒಪ್ಪಿಸಿದ್ದಾರೆ. ಪೋಸ್ಕೋ ಕಾಯ್ದೆಯ ಪ್ರಕಾರ ಆರೋಪಿಗೆ ತಕ್ಕ ಕಾಯ್ದೆಗಳನ್ನು ಹಾಕಿ ಸಂತ್ರಸ್ತ ಬಾಲಕಿಗೆ ಹಾಗೂ ಕುಟುಂಬದವರಿಗೆ ನ್ಯಾಯ ಒದಗಿಸಬೇಕು, ಈ ಘಟನೆಯು ಬಳ್ಳಾರಿ ಜಿಲ್ಲೆಯಲ್ಲಿ ಹಾಗೂ ಇತರೆ ಜಿಲ್ಲೆಗಳಲ್ಲಿ ಮರುಕಳಿಸುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಬಿ. ರಿಯಾಜ್ ಅಹ್ಮದ್, ರಫೀಕ್, ಶಿವು, ಹುಲಗಪ್ಪ, ಎನ್. ದುರುಗಪ್ಪ, ತಮ್ಮಣ್ಣ ಹಾಗೂ ಎಚ್. ಜಗದೀಶ ಸೇರಿದಂತೆ ಇತರರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















