ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿನಿಯರು ಚೆನ್ನಾಗಿ ಓದಿ ಶೈಕ್ಷಣಿಕ ಪ್ರಗತಿ ಸಾಧಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು. ಶಿಕ್ಷಣ ಭವಿಷ್ಯದ ದಾರಿ ದೀಪ ಎಂದು ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಮದ್ದಾನಪ್ಪ ಬಿಡನಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದಲ್ಲಿರುವ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಹಾಗೂ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂತಿ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರ ಸನ್ಮಾನ ಮತ್ತು ಸಾಂಸ್ಕೃತಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯು ಇಲ್ಲಿನ ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಮಟ್ಟದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದೆ. ಶಿಕ್ಷಣ ಸಮಾಜದ ಸರ್ವತೋಮುಖ ಅಭಿವದ್ಧಿಗೆ ಮೂಲ ಅಸ್ತ್ರವಾಗಿದೆ. ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಮತ್ತು ಏಕಾಗ್ರತೆಯನ್ನು ಮೈಗೂಡಿಸಿಕೊಂಡು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.
ಶಾಸಕ ಜೆ.ಎನ್.ಗಣೇಶ್ ಉದ್ಘಾಟಿಸಿದರು. ಹೆಚ್.ವೀರಾಪುರದ ಶಿವಲಿಂಗ ಮಠದ ಜಡೇಶ್ ತಾತ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ವಿವಿಎಸ್ಎಸ್ ಟ್ರಸ್ಟ್ ಅಧ್ಯಕ್ಷೆ ರಾಜಮ್ಮ ಹುಲುಗಪ್ಪ ಅಧ್ಯಕ್ಷತೆ ವಹಿಸಿದ್ದರು.
ನಂತರ ಪದವಿಯಲ್ಲಿ ಅತಿ ಹೆಚ್ಚು ಅಂಕದ ಸಾಧನೆ ಮಾಡಿದ ವಿದ್ಯಾರ್ಥಿನಿಯರಾದ ಇಂದ್ರಜಾ, ಗೌಡ್ರು ರಷ್ಮಿ, ತುಂಗಭದ್ರ, ಕೆ.ಎಂ.ಪವಿತ್ರಾ, ಜಿ.ಸಿದ್ದೇಶ್ವರಿ, ಎಂ.ಸುನಂದಾ, ಎನ್.ಭಾಗ್ಯಮ್ಮ, ಎಂ.ಐಶ್ವರ್ಯ, ಕೆ.ಅಕ್ಷತಾ, ಕೆ.ಅಂಜಲಿ, ಶಮಾ ಪರ್ವಿನ್, ಸನ್ಮಾನಿಸಿ ಗೌರವಿಸಿದರು. ತದ ನಂತರ ಅಂತಿ ವರ್ಷದ ವಿದ್ಯಾರ್ಥಿನಿಯರಿಗೆ ಅದ್ಧೂರಿಯಾಗಿ ಬೀಳ್ಕೊಡಲಾಯಿತು.
ಇಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಕನ್ನಡ ಸೇರಿದಂತೆ ವಿವಿಧ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದರು.
ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ, ಅಕ್ಕಿ ಗಿರಿಣಿ ಮಾಲಿಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ, ಪುರಸಭೆ ಮಾಜಿ ಸದಸ್ಯ ಸಿ.ಆರ್.ಹನುಮಂತ, ವಿವಿಎಸ್ಎಸ್ ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ್ ನಾಯಕ, ಪ್ರಾಚಾರ್ಯರಾದ ಮಹಮ್ಮದ್ ಶಫಿ, ಬಸವರಾಜಸ್ವಾಮಿ, ಮದ್ದಾನೆಪ್ಪ ಬಿಡನಾಳ, ಮಹಾಬಲೇಶ್ವರಪ್ಪ, ದಕ್ಷಿಣ ಭಾರತದ ಸಾವಿತ್ರಿ ಬಾಯಿ ಪುಲೆ ಅತ್ಯುತ್ತಮ ಪ್ರಶಸ್ತಿ ಪುರಸ್ಕೃತೆ ಶಾಂತ ಗಡ್ಡದ್, ವಸತಿ ನಿಲಯ ಪಾಲಕಿ ಎಂ.ಬಿ.ಶುಭಾ ಸೋಮಶೇಖರ, ವೈದ್ಯಕೀಯ ಕ್ಷೇತ್ರದ ಡಾ.ಶ್ರದ್ಧಾ ಭರತ್, ಆರೋಗ್ಯ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಶೋಭಾ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















