ಬಳ್ಳಾರಿ : ನಗರದ ಮೋತಿ ಸರ್ಕಲ್ ನ ಖಾದಿ ಬಂಡಾರದ ರಾಕ್ ವಿಲ್ಲೆ ಕರೋಕೆ ಕ್ಲಬ್ಬಿನಲ್ಲಿ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರ 52ನೇ ಹುಟ್ಟುಹಬ್ಬದ ಪ್ರಯುಕ್ತ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಎಸ್. ರಾಮಪ್ಪ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಗೌರವಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಟಿ ರುದ್ರಪ್ಪ, ತೋರಣಗಲ್ಲನ ಬಂಡಾಯ ಸಾಹಿತಿ ಅಬ್ದುಲ್ ಹೈ, ಸಂಜೀವಿನಿ ಜೀವ ರಕ್ಷಕ ಟ್ರಸ್ಟಿನ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಪದಾಧಿಕಾರಿಗಳಾದ ಡಿಜೆ ತಿರುಮಲ, ಲೋಕೇಶ್ ಸೇರಿದಂತೆ ಇತರರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















