ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವ ತತ್ವದ ಜಾಗತಿಕ ವಿಸ್ತರಣೆಗೆ ‘ವಚನ ವಿಶ್ವವಿದ್ಯಾಲಯ’ : ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ.

ಬೆಂಗಳೂರು: ಬಸವಾದಿ ಶರಣರ ವಚನಗಳಲ್ಲಿನ ಮಾನವೀಯ ಹಾಗೂ ಸಾಮಾಜಿಕ ಆಶಯಗಳನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಯ ಅಗತ್ಯತೆ ಇದೆ. ಈ ಸಂಬಂಧ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ವಿವಿಧ ಮಠಗಳ ಪರಮಪೂಜ್ಯ ಗುರುಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಕಳೆದ ವರ್ಷ ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯಂತೆ ಬಸವಕಲ್ಯಾಣದಲ್ಲಿ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಯಿತು.
ನಿಯೋಗದಲ್ಲಿ ಪರಮ ಪೂಜ್ಯರುಗಳಾದ ನಾಡೋಜ ಬಸವಲಿಂಗ ಪಟ್ಟದ್ದದೇವರು, ಡಾ. ತೋಂಟದ ಸಿದ್ದರಾಮ ಸ್ವಾಮಿಗಳು, ಗುರುಮಹಾಂತ ಸ್ವಾಮಿಗಳು, ಪ್ರಭುಚನ್ನಬಸವ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಗಳ ಗುರುಗಳು, ಸಚಿವರಾದ ಎಂ ಬಿ ಪಾಟೀಲ್ ಶ್ರೀ ಈಶ್ವರ ಖಂಡ್ರೆ, ಹಿರಿಯ ಶಾಸಕರಾದ ಶ್ರೀ ಬಿ.ಆರ್. ಪಾಟೀಲ್, ಸಮಾಜದ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!