ಶಿವಮೊಗ್ಗ : ಶಿಕಾರಿಪುರದ ಆರಾಧ್ಯದೈವ, ಐತಿಹಾಸಿಕ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಶಿವಮೊಗ್ಗ ಸಂಸದ ಶ್ರೀ ಬಿ ವೈ.ರಾಘವೇಂದ್ರ ಅವರು ತಮ್ಮ ಸಹೋದರ, ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಮತ್ತು ಕುಟುಂಬದ ಎಲ್ಲಾ ಸದಸ್ಯರೊಂದಿಗೆ ತೆರಳಿ ಅವರ ಪೂಜ್ಯ ತಂದೆಯವರಾದ ಶ್ರೀ ಬಿ ಎಸ್ ಯಡಿಯೂರಪ್ಪ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅವರು ಜಿಲ್ಲೆಯ ದಿವ್ಯಾಂಗರಿಗೆ ವಿಶೇಷ ವಾಹನಗಳನ್ನು ಹಾಗೂ ತಾಯಂದಿರಿಗೆ, ಸಹೋದರಿಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.




















