ಬಳ್ಳಾರಿ / ಕುರುಗೋಡು : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಾಗೂ ತಾಲೂಕು
ಆರೋಗ್ಯ ಇಲಾಖೆ ಇವರ ಸಹಯೋಗದೊಂದಿಗೆ
ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಜಾತ್ರೆಯ ಪ್ರಯುಕ್ತವಾಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಆರೋಗ್ಯ ವಸ್ತು ಪ್ರದರ್ಶನ ಕೇಂದ್ರ ಹಮ್ಮಿಕೊಳ್ಳಲಾಯಿತು.
ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಶ್ರೀಮತಿ ಖರ್ಷಿದ್ ಬೇಗಂ ಮಾತನಾಡಿ ಆಯುಷ್ಮಾನ್ ಭಾರತ್ ಅತಿದೊಡ್ಡ ಆರೋಗ್ಯ ಭರವಸೆ ಯೋಜನೆಯಾಗಿದ್ದು, ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಕುಟುಂಬಕ್ಕೆ ವಾರ್ಷಿಕ ₹5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಮೂಲ ಸೌಕರ್ಯಗಳನ್ನು ಸುಧಾರಿಸಲು ಮತ್ತು ಪ್ರಮುಖ ಕಾಯಿಲೆಗಳ ನಿಯಂತ್ರಣಕ್ಕಾಗಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ.
ಪ್ರಧಾನ ಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ ಭಾರತದಿಂದ ಕ್ಷಯರೋಗವನ್ನು (TB) ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ, ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮತ್ತು ತಾಯಿ-ಮಗು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅರೋಗ್ಯ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಣಾ ಘಟಕ ವಿಭಾಗದ ಆರೋಗ್ಯ ಅಧಿಕಾರಿಗಳು, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು
ಶ್ರೀ ಮಹಮ್ಮದ್ ರಫಿ, ಆರ್ ಕೆ ಎಸ್ ಕೆ ಸ್ನೇಹಾಕ್ಲಿನಿಕ್ ಆಪ್ತ ಸಮಾಲೋಚಕ ಮಹಬೂಬ್ ಭಾಷಾ ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















