ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲ್ಲಿಕಾರ್ಜುನ ಮುತ್ಯಾ ಮೇಲಿನ ಆರೋಪ ನಿರಾಧಾರ : ಅನಂತಪ್ಪ ಯದ್ಲಾಪೂರ್.

ರಾಜಕೀಯ ಷಡ್ಯಂತ್ರ ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ

ಗುರುಮಠಕಲ್: ಶಹಾಪುರ ತಾಲೂಕಿನ ಮಹಲ್ ರೋಜಾ ದೇವಸ್ಥಾನದ ಯುವ ಧರ್ಮಗುರು ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವು ನಿರಾಧಾರವಾಗಿದ್ದು, ಇದು ರಾಜಕೀಯ ಷಡ್ಯಂತ್ರದ ಭಾಗವಾಗಿದೆ ಎಂದು ಮಲ್ಲಿಕಾರ್ಜುನ ಮುತ್ಯಾ ಭಕ್ತ ಮಂಡಳಿ ಹಾಗೂ ಕೋಲಿ ಸಮಾಜದ ಮುಖಂಡರು ಆರೋಪಿಸಿದ್ದಾರೆ.

ಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕೋಲಿ ಸಮಾಜದ ಮುಖಂಡ ಅನಂತಪ್ಪ ಯದ್ಲಾಪೂರ್ ಕೂಡಲೇ ಮಲ್ಲಿಕಾರ್ಜುನ ಮುತ್ಯಾ ಅವರನ್ನು ಆರೋಪ ಮುಕ್ತಗೊಳಿಸಿ, ಸುಳ್ಳು ಆರೋಪ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಕೋಲಿ ಸಮಾಜ ಮತ್ತು ಮಲ್ಲಿಕಾರ್ಜುನ ಮುತ್ಯಾ ಭಕ್ತರ ವತಿಯಿಂದ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಲಿ ಸಮಾಜದ ಮುಖಂಡೆ ಶ್ರೀಮತಿ ಅಮೃತಮ್ಮ ಬೋರಬಂಡಾ, ಮಲ್ಲಿಕಾರ್ಜುನ ಮುತ್ಯಾರವರು ತಮ್ಮ ತಂದೆ ಹನುಮಂತರಾಯ ಮುತ್ಯಾ ಅವರ ನಂತರ ಪೀಠವನ್ನು ಅಲಂಕರಿಸಿ ಅನೇಕ ಭಕ್ತರ ನಡುವೆ ಪವಾಡ ಪುರುಷರಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಇವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವು ಯಾವುದೇ ವಾಸ್ತವಾಂಶವಿಲ್ಲದೆ ಮಾಡಿರುವ ನಿರಾಧಾರ ಆರೋಪವಾಗಿದ್ದು, ಅವರ ವರ್ಚಸ್ಸನ್ನು ಕುಗ್ಗಿಸಲು ಕೆಲವರು ನಡೆಸಿರುವ ಹುನ್ನಾರ ಎಂದು ಕಿಡಿಕಾರಿದರು.

ಹಿರಿಯ ಮುಖಂಡ ಸೂರ್ಯನಾರಾಯಣ ನೀರೆಟಿ ಮಾತನಾಡಿ ಇತ್ತೀಚೆಗೆ ಹಿಂದೂ ಧರ್ಮದ ದೇವಸ್ಥಾನಗಳ ಕುರಿತು ಬೇಕಂತಲೇ ಅಪಪ್ರಚಾರ ನಡೆಸಿ ಭಕ್ತರ ನಂಬಿಕೆಯನ್ನು ಕುಂದಿಸುವ ಕಾರ್ಯಗಳು ನಡೆಯುತ್ತಿವೆ. ನಾವು ಯಾವುದೇ ಕಾರಣಕ್ಕೂ ಇಂತಹ ಷಡ್ಯಂತ್ರಗಳಿಗೆ ಬಲಿಯಾಗಬಾರದು ಎಂದು ಹೇಳಿದರು.

ಈ ವೇಳೆ ಕೋಲಿ ಸಮಾಜದ ಅಧ್ಯಕ್ಷ ಅಶೋಕ್ ಸಂಜನೊಳ ಸೇರಿದಂತೆ ಕೋಲಿ ಸಮುದಾಯದ ಮುಖಂಡರು, ಪ್ರಕರಣವನ್ನು ಸುಳ್ಳು ಎಂದು ಆರೋಪಿಸಿ ತಪ್ಪಿದಸ್ತರ ವಿರುದ್ಧ ಕ್ರಮ ತೆಗೆದು ಕೊಳ್ಳಬೇಕು ಇಲ್ಲದಿದ್ದರೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಶರಣಪ್ಪ ಧರ್ಮಪುರ್, ತಿಮ್ಮಪ್ಪ ನಿಂಗವೊಳ್, ಕನ್ನಯ್ಯ ಪಡಿಗೆ, ಬಸ್ಸಣ್ಣ ಅರಬಿಂಜರ್, ಶ್ರೀನಿವಾಸ್ ಗಾಳ, ನರಸಿಮುಲು ಗಂಗನೊಳ, ರಾಮುಲು ಕೊಡಗಂಟಿ, ಶೇಷಪ್ಪ ಬುರ್ಜು, ಮಹೇಶ್ ಗಡ್ಡಂ, ಸಾಬಣ್ಣ ಮನ್ನೇ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!