ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಪುರಸಭೆ ಮುಂಭಾಗದಲ್ಲಿ ನಾಯಿಗಳ ಹಾವಳಿ

ಕಂಪ್ಲಿ ಪುರಸಭೆ ಮುಂಭಾಗದಲ್ಲಿ ನಾಯಿಗಳ ಹಾವಳಿ ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.
ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಪುರಸಭೆಯವರು ಕ್ರಮ ಕೈಗೊಳ್ಳಬೇಕು, ಪಟ್ಟಣದಲ್ಲಿ 23 ವಾರ್ಡುಗಳಿವೆ, ಪ್ರತಿಯೊಂದು ವಾರ್ಡಿನ ಬೀದಿ ಬೀದಿಯಲ್ಲೂ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಹಿಂಡು ಹಿಂಡಾಗಿ ಸುತ್ತಾಡುವ ನಾಯಿಗಳು ದಾರಿಯಲ್ಲಿ ಸಂಚರಿಸುವ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುವುದರ ಜೊತೆಗೆ ಶಾಲಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ ಎಂದಿದ್ದಾರೆ.

ಪಟ್ಟಣದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಮಾಂಸ ಮಾರಾಟದ ಅಂಗಡಿಗಳಿಂದಾಗಿ ನಾಯಿಗಳ ಸಂತತಿ ಹೆಚ್ಚಾಗುತ್ತಿದೆ. ಮಾಂಸದ ಅಂಗಡಿಗಳ ಬಳಿಯಲ್ಲಿ ಬಿಸಾಡುವ ತ್ಯಾಜ್ಯಗಳನ್ನು ತಿನ್ನಲು ಬೀಡುಬಿಟ್ಟಿರುವ ಅವು, ರಸ್ತೆಗಳ ಎರಡೂ ಬದಿಯಲ್ಲಿ ಮಲಗುತ್ತವೆ. ಪಕ್ಕದಲ್ಲಿ ಹೋಗುವವರ ಮೇಲೆ ಪಕ್ಕನೆ ಎರಗುತ್ತವೆ ಎಂದಿದ್ದಾರೆ.
ಒಂದು ನಾಯಿ ಹಿಂದಟ್ಟಿದರೆ ಅದರ ಹಿಂದೆ ಹತ್ತಾರು ನಾಯಿಗಳು ಏಕಕಾಲದಲ್ಲಿ ದಾಳಿ ಮಾಡುತ್ತವೆ.
ಪಟ್ಟಣದಲ್ಲಿ ಬೀದಿನಾಯಿಗಳ ಜೊತೆಯಲ್ಲೆ ಕೋತಿಗಳ ಹಾವಳಿಯೂ ಜಾಸ್ತಿಯಾಗಿದೆ. ಮನೆಗಳಲ್ಲಿ ನೆಮ್ಮದಿಯಾಗಿ ಮಲಗುವಂತಿಲ್ಲ. ರಾತ್ರಿಯಿಡೀ ಹೂಳಿಡುವ ನಾಯಿಗಳಿಂದ ಸಮಸ್ಯೆ ಒಂದೆಡೆಯಾದರೆ ಬೆಳಕಾಗುತ್ತಿದ್ದಂತೆ ಹಿಂಡು ಹಿಂಡಾಗಿ ಬರುವ ಕೋತಿಗಳ ಉಪಟಳ ತಾಳಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!