ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್ ಅವರು ಖ್ಯಾತ ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ನಿನ್ನೆ (ಮಾರ್ಚ್ 05) ಸಂಜೆ ನಡೆದ ಎಸ್. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















