ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವೇಶ್ವರ ಬಿ.ಎಡ್ ಕಾಲೇಜಿಗೆ ಶೇ. 100 ಫಲಿತಾಂಶ

ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಬಸವೇಶ್ವರ ಬಿ.ಎಡ್. ಕಾಲೇಜಿಗೆ ಪ್ರಸಕ್ತ ಸಾಲಿನ ಬಿ.ಎಡ್. ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಲಭಿಸಿದೆ.
ದ್ವಿತೀಯ ಸೆಮಿಸ್ಟರ್ ನಲ್ಲಿ ರಾಜಕುಮಾರ ಕಾಶಿನಾಥ ಶೇ 89.3, ಪ್ರಿಯಾಂಕ ಸಿದ್ರಾಮ ಶೇ 88.8, ಉಷಾರಾಣಿ ಪ್ರಕಾಶ ಶೇ 88.3, ಅನುಪಮಾ ಹೊಳ್ಳ ಶೇ 88, ಕಲ್ಪನಾ ಸುಭಾಷ್ ಶೇ 86.8, ನಾಲ್ಕನೇ ಸೆಮಿಸ್ಟರ್ ನಲ್ಲಿ ರೋಹಿಣಿ ಚಂದ್ರಕಾಂತ ಶೇ 89.1, ಕೆ.ಎ. ಶಿವಶರಣಪ್ಪ ಶೇ 88.3, ವಿಜಯಲಕ್ಷ್ಮಿ ರಮೇಶ ಶೇ 88.3 ಹಾಗೂ ಪ್ರಿಯಾಂಕ ಶ್ರೀರಂಗ ಶೇ 88.10 ರಷ್ಟು ಅಂಕ ಗಳಿಸಿ ಗಮನ ಸೆಳೆದಿದ್ದಾರೆ.
ಬೀದರ್ ವಿಶ್ವವಿದ್ಯಾಲಯದಿಂದ ಹೊರ ಬಂದ ಕಾಲೇಜಿನ ಮೊದಲ ಬ್ಯಾಚ್ ಇದಾಗಿದೆ.
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ನಮೋಶಿ, ಆಡಳಿತ ಮಂಡಳಿ ಸದಸ್ಯರೂ ಆದ ಬಿ.ವಿ.ಬಿ. ಕಾಲೇಜು ಆವರಣ ಸಂಸ್ಥೆಗಳ ಸುಧಾರಣಾ ಸಮಿತಿ ಸಂಚಾಲಕ ಡಾ. ರಜನೀಶ್ ವಾಲಿ, ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!