ಎಮ್ಮಿಗನೂರು: ಗ್ರಾಮದ ಸರಕಾರಿ ಶತಮಾನ ಶಾಲೆಯ ಶಿಕ್ಷಕ ಎಸ್ .ರಾಮಪ್ಪ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆ ಪರಿಗಣಿಸಿ 2026ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರುಗುಪ್ಪದ ನೇತ್ರಕಲಾ ಸಂಘದ ಕಾರ್ಯದರ್ಶಿ ವೀರೇಶ್ ದಳವಾಯಿ ತಿಳಿಸಿದರು.
ಮಾ.8ರಂದು ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯುವ ನೇತ್ರ ಕಲಾ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವರದಿ : ಜಿಲಾನಸಾಬ್ ಬಡಿಗೇರ್



















