ಬಳ್ಳಾರಿ: ಹೌದು ಸದ್ಯದ ಪರಿಸ್ಥಿತಿ ನಿಜಕ್ಕೂ ಆತಂಕ ಕಾರಿ ಮತ್ತು ವಿಷಾದನೀಯ. ನಗರದ ಹೊರವಲಯದ ತಾಳೂರು ರಸ್ತೆಯ ಖಾಸಗಿ ಗುರುಕುಲ ಶಾಲೆಯಲ್ಲಿ ನಡೆದ ಈ ಘಟನೆ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ.
ಶಾಲೆಯ ವಸತಿ ನಿಲಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯವಾಗಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಕಬ್ಬಿಣದ ರಾಡ್‌ನಿಂದ ನಡೆಸಿದ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ವಾರ್ಡನ್ ಸೇರಿದಂತೆ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಘಟನೆಯ ವಿವರ :
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನಡುವೆ ಸಣ್ಣ ವಿಷಯಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿಯೋರ್ವ, ಅಲ್ಲಿದ್ದ ಕಬ್ಬಿಣದ ರಾಡ್‌ನಿಂದ ತನ್ನ ಸಹಪಾಠಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ದಾಳಿಯ ತೀವ್ರತೆಗೆ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಏಳು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಗಲಾಟೆ ಬಿಡಿಸಲು ಬಂದ ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಅಲ್ಲಿದ್ದ ಕಬ್ಬಿಣದ ರಾಡ್‌ನಿಂದ ತನ್ನ ಸಹಪಾಠಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ದಾಳಿಯ ತೀವ್ರತೆಗೆ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಏಳು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಗಲಾಟೆ ಬಿಡಿಸಲು ಬಂದ ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡಿರುವ ಎಲ್ಲಾ ಏಳು ವಿದ್ಯಾರ್ಥಿಗಳನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳೆಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿನಿಮಾಗಳ ಅತಿರೇಕದ ಪ್ರಭಾವ, ಮೊಬೈಲ್ ಗೀಳು ಮತ್ತು ನೈತಿಕ ಶಿಕ್ಷಣದ ಕೊರತೆಯಿಂದ ಇಂದಿನ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ.
ವರದಿ : ಜಿಲಾನಸಾಬ್ ಬಡಿಗೇರ್



















