ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ವರದಾನ : ಕೆ.ಶ್ರೀನಿವಾಸರಾವ್

ಕಂಪ್ಲಿ: ರಾಜ್ಯದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಉತ್ತಮವಾಗಿರಲಿ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಸಾಕಷ್ಟು ಜನರ ಜೀವನ ನೆಮ್ಮದಿಯಿಂದ ಕೂಡಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಹೇಳಿದರು.
ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ಘನ ಸರ್ಕಾರದ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳು ಜನರಿಗೆ ವರದಾನವಾಗಿದೆ. ಈ ಯೋಜನೆಗಳನ್ನು ಅರ್ಹ ಕುಟುಂಬಗಳಿಗೆ ತಲುಪಿಸುವಂತಾಗಬೇಕು ಎಂದರು.
ತಾ. ಪಂ.ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರೂ ಕೂಡ ಪುರುಷರಷ್ಟೇ ಸಮಾನರು. ಮನೆಯ ಯಜಮಾನಿಕೆಯಿಂದ ಹಿಡಿದು ನಮ್ಮ ಭಾರತ ದೇಶದ ಪ್ರಸ್ತುತ ಹಣಕಾಸು ಸಚಿವೆಯವರೆಗೂ ಮಹಿಳೆಯರ ಪಾತ್ರ ಅತ್ಯುತ್ತಮವಾಗಿದೆ. ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬಂದು ಹಲವಾರು ರಂಗದಲ್ಲಿ ತಮ್ಮದೇ ಆದ ಪ್ರತಿಭೆಯ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಕೂಡ ಪ್ರಬಲ ಪೈಪೋಟಿ ನೀಡುತ್ತಿರುವುದು ಒಂದು ಸಂತೋಷದಾಯಕ ವಿಷಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹಾಗೂ ಶ್ರೀಶೈಲಗೌಡ, ಕಲ್ಯಾಣ ಕರ್ನಾಟಕ ರಸ್ತೆ ವಿಭಾಗದ ದೇವರೆಡ್ಡಿ, ಆಹಾರ ಮತ್ತು ನಾಗರಿಕ ಇಲಾಖೆಯ ವಿರುಪಾಕ್ಷಿಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೋಹನ್, ಲತಿಫಾಬೇಗಂ, ಪಿಡಿಒಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನಿರ್ದೇಶಕರು, ಸ್ವಸಹಾಯ ಸಂಘದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ತಾಲೂಕು ಪಂಚಾಯಿತಿಯ ಎಲ್ಲಾ ಅಧಿಕಾರಿ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!