ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಶ್ರೀಮದ್ ವೀರಶೈವ ಧರ್ಮ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಶರಣರು, ಮಹಾತ್ಮರು ನೀಡಿದ ಸಂದೇಶಗಳನ್ನು ಮನುಕುಲಕ್ಕೆ ಮಾರ್ಗದರ್ಶಿಯಾಗಿವೆ. ಅವರುಗಳ ಮಾರ್ಗದಲ್ಲಿ ನಡೆಯುವ ಮೂಲಕ ಬದುಕನ್ನು ಪಾವನ ಮಾಡಿಕೊಳ್ಳಬೇಕು, ಪಟ್ಟಣದಲ್ಲಿ ಸೋಮವಾರ ಶ್ರೀಮದ್ ವೀರಶೈವ ಧರ್ಮ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ಪಂಚಲೋಹದ ಮೂರ್ತಿ ಹಾಗೂ ಕಳಸ-ಕನ್ನಡಿಗಳೊಂದಿಗೆ ಸಕಲ ಮಂಗಲವಾದ್ಯಗಳ ಮೆರವಣಿಗೆಯು ಸಣಾಪುರ ರಸ್ತೆಯ ಶ್ರೀ ಶಾರದಾ ಶಾಲೆಯಿಂದ ಪ್ರಾರಂಭವಾಗಿ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಗತ್ರಾಯ ಸಂಸ್ಕೃತ ಪಾಠಶಾಲೆಯಲ್ಲಿ ಮುಕ್ತಾಯಗೊಂಡಿತು.

ಮೆರವಣಿಗೆಯ ವೈಶಿಷ್ಟ್ಯ:
ಪಂಚಲೋಹದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ಮೂರ್ತಿಯು ಭವ್ಯ ಮೆರವಣಿಗೆಯ ಆಕರ್ಷಣೆಯಾಗಿತ್ತು.
ಮೆರವಣಿಗೆಯಲ್ಲಿ ಕಳಸ-ಕನ್ನಡಿ, ಮಂಗಲವಾದ್ಯಗಳು, ಮತ್ತು ಸಾಂಸ್ಕೃತಿಕ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ಸಣಾಪುರ ರಸ್ತೆಯ ಶ್ರೀ ಶಾರದಾ ಶಾಲೆಯ ಆವರಣದಿಂದ ಆರಂಭವಾಗಿ, ಹಳೆಬಸ್ ನಿಲ್ದಾಣ ಮತ್ತು ಡಾ. ರಾಜಕುಮಾರ್ ಮುಖ್ಯ ರಸ್ತೆಯ ಮೂಲಕ ಸಾಗಿತು. ರೇಣುಕಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ವೀರಶೈವ ಸಮಾಜ ಬಾಂಧವರು ಕರೆ ನೀಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!