ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಅಭಿವೃದ್ಧಿಗೆ ಮಹಿಳೆಯ ಸಬಲೀಕರಣವೇ ನಿಜವಾದ ಶಕ್ತಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸಿರುಗುಪ್ಪ-ಮಹಿಳೆಯರ ಸಬಲೀಕರಣವೇ ನವ ಭಾರತ ನಿರ್ಮಾಣಕ್ಕೆ ಅಡಿಪಾಯ ಎಂದು ಸಿವಿಲ್ ನ್ಯಾಯಾಧೀಶ ಆರ್‌.ಎಚ್.ಅಶೋಕ್ ಅವರು ಹೇಳಿದರು
ತಾಲೂಕ ಪಂಚಾಯತ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ತಾಲೂಕು ಆಡಳಿತ ತಾಲೂಕು ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೊಲೀಸ್ ಇಲಾಖೆ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ ಮಹಿಳೆಯರಿಗೆ ಶಿಕ್ಷಣ ನೀಡುವ ಮೂಲಕ ಅವರಲ್ಲಿ ಸ್ವಾವಲಂಬನೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ತುಂಬಬೇಕು ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಾಧ್ಯ ಎಂದು ಅವರು ಕರೆ ನೀಡಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹ ದಂಡಾಧಿಕಾರಿ ತಹಶೀಲ್ದಾರ್ ಗೌಸಿಯ ಬೇಗಂ ಅವರು ಮಾತನಾಡಿ ಶಕ್ತಿ ಸಹನೆ ಮತ್ತು ಸಾಧನೆಯ ಪ್ರತಿಕ ಮಹಿಳೆಯರಿಗೆ ಸಮರ್ಪಿತ ದಿನ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್. ದಂಡಪ್ಪನವರ್ ಅವರು ಮಾತನಾಡಿ ಮಹಿಳಾ ಸಮಾನತೆ ಗೌರವ ಮತ್ತು ಅವಕಾಶಗಳೊಂದಿಗೆ ಮಹಿಳೆಯರು ಮುಂದುವರಿದಾಗ ಸಮಾಜವು ಶಕ್ತಿಶಾಲಿಯಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಿ.ಪ್ರದೀಪ್ ಕುಮಾರ್, ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಉಪ್ಪಾರು ವೆಂಕೋಬ, ಉಪಾಧ್ಯಕ್ಷ ಶರೀಫ್ ಸಾಬ್, ಸರ್ಕಾರಿ ಅಭಿಯೋಜಕ ಶಿವರಾಜ, ವಕೀಲರ ಸಂಘದ ತಾಲೂಕ ಜಂಟಿ ಕಾರ್ಯದರ್ಶಿ ಮಂಜುಳಾ, ವಕೀಲೆ ಹೇಮಲತಾ, ತಾಲೂಕ ಮಟ್ಟದ ವಿವಿಧ ಅಧಿಕಾರಿಗಳು ಮಹಿಳೆಯರು ಇತರರು ಪಾಲ್ಗೊಂಡಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!