ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸ ದರೋಜಿ ಸೊಸೈಟಿಯ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ವಿರೋಧ ಆಯ್ಕೆ

ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಗೊಂಡರು.
ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಲ್ಲಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ಇತ್ತೀಚೆಗೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ನೂತನ ಉಪಾಧ್ಯಕ್ಷರಾಗಿ ಹನುಮಂತಪ್ಪ ಇವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ (ಬಳ್ಳಾರಿ ಸಹಕಾರ ಇಲಾಖೆ) ಬಿ.ನಾಗರಾಜ ಘೋಷಿಸಿದರು.
ಪ್ರಕ್ರಿಯೆ ವೇಳೆ ಮುಖ್ಯ ಕಾರ್ಯನಿರ್ವಾಹಕ ವಿ.ಮಲ್ಲಿಕಾರ್ಜುನ, ಸಹಕಾರ ಸಂಘದ ಅಧ್ಯಕ್ಷ ಪಿ.ಎಸ್.ಲಿಂಗಪ್ಪ, ನಿರ್ದೇಶಕರಾದ ರಾಮಾಂಜಿನೇಯ, ಡಿ.ವಿ.ಮಂಜುನಾಥ, ಎಸ್.ವೆಂಕಟೇಶ, ಎನ್.ಮರಿಸ್ವಾಮಿ, ಹೆಚ್.ದಾನಪ್ಪ, ಕೆ.ತಿಮ್ಮಯ್ಯ, ವಲಿಮಸೀದಿ ಇದ್ದರು.
ನಂತರ ನೂತನ ಉಪಾಧ್ಯಕ್ಷರಿಗೆ ಮಾಲಾರ್ಪಣೆಯೊಂದಿಗೆ ಗೌರವಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಹಕಾರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!