ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪವರ್ ಸ್ಟಾರ್ ಪುನೀತ್ ರಾಜಕುಮಾರ ಪ್ರಶಸ್ತಿಗೆ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಆಯ್ಕೆ ‌ ‌


ಕಲಬುರಗಿ : ಮಾಚ್೯ 12 ರಂದು “ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ’ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅವರು ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಇರುವ ನಿಸ್ವಾರ್ಥ ಸಮಾಜದ ಸೇವಕ- ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್. ಆಯ್ಕೆಯಾಗಿದ್ದಾರೆ. ಇದೇ
ಮಾಚ್೯ – ೧೫ ರಂದು ರವಿವಾರ ದಿನದಂದು ಡಾ.ಅಂಬೇಡ್ಕರ್ ಸಭಾ ಭವನ ಯಲಹಂಕ ಬೆಂಗಳೂರಿನಲ್ಲಿ ಟಿವಿ-೪ ಸುದ್ದಿ ವಾಹಿನಿ, ಶ್ರೀ ಶಿರಡಿ ಸಾಯಿದೀಪ ಮೀಡಿಯಾ ಬ್ರಾಡ್ ಕಾಸ್ಟಿಂಗ್ ಸರ್ವಿಸಸ್ ಶ್ರೀ ಶಿರಡಿ ಸಾಯಿ ದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸುಮಾರು 1850 ಕ್ಕೊ ಹೆಚ್ಚು ಜನತೆಗೆ ಉಚಿತವಾಗಿ (ಕ್ಷೌರ) ಸೇವೆ ಸಲ್ಲಿಸಿದ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರಿಗೆ ಈ ವರ್ಷ ಕೊಡುಮಾಡುವ “ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ, TV-4 ಕನ್ನಡ ಸುದ್ದಿವಾಹಿನಿ ಮಾಲೀಕರು ಮತ್ತು ಸಂಸ್ಥಾಪಕ ಅಧ್ಯಕ್ಷರು ಶ್ರೀ ಶಿರಡಿ ಸಾಯಿ ದೀಪ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರಾದ ಡಾ. ಸಾಯಿ ಸತೀಶ ತೋಟಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!