ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಜೊತೆಗೆ ಬಾಲ್ಯ ವಿವಾಹ, ದೌರ್ಜನ್ಯ ತಡೆಯಲು ಜಾಗೃತಿವಹಿಸಿ : ಎ.ಸಿ ಹೆಚ್.ಡಿ.ರಾಜೇಶ

ಬಳ್ಳಾರಿ / ಕಂಪ್ಲಿ : ಬಾಲ್ಯ ವಿವಾಹ ಕಾನೂನು ಬಾಹಿರ. ಇಂತಹ ಪ್ರಕರಣಗಳು ಕಂಡು ಬಂದರೆ ನಾಗರಿಕರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮತ್ತು ಇಂತಹ ಕಾನೂನು ಬಾಹಿರ ಪ್ರಕರಣಗಳನ್ನು ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಹೆಚ್.ಡಿ.ರಾಜೇಶ ಹೇಳಿದರು.
ಪಟ್ಟಣದ ಪುರಸಭೆಯಲ್ಲಿ ಗುರುವಾರ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಯನ್ನು ಪುರಸಭೆಗೂ ವಿಸ್ತರಿಸಲಾಗಿದೆ. ಸಮಿತಿ ರಚಿಸಿ, ಮಹಿಳೆಯರ ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲಾ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಎನ್‌ಜಿಒ ಸಮ್ಮುಖದಲ್ಲಿ ಕಂಪ್ಲಿಯಲ್ಲಿ ಮೊದಲ ಬಾರಿಗೆ ಸಭೆ ಜರುಗಿದ್ದು, ಮುಂದಿನ ಎರಡು ದಿನದಲ್ಲಿ ಕಾವಲು ಸಮಿತಿ ರಚಿಸಿ, ಆದೇಶ ಹೊರಡಿಸಲಾಗುವುದು. ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಕಾನೂನು ಹಕ್ಕುಗಳ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಜಾಗೃತಿವಹಿಸಬೇಕಾಗಿದೆ. ತಾಲೂಕು ಮತ್ತು ಗ್ರಾಮೀಣ ಭಾಗದಲ್ಲಿ ಕರಪತ್ರಗಳನ್ನು ಹೊರಡಿಸಿ, ಜಾಗೃತಿಗೆ ಮುಂದಾಗಬೇಕು. ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಕಟ್ಟಿನಿಟ್ಟಿನ ಕ್ರಮವಹಿಸಬೇಕಾಗಿದೆ. ಪೋಷಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಮಕ್ಕಳ ಭಿಕ್ಷಾಟನೆ ತಡೆಗಟ್ಟಿ, ಶಿಕ್ಷಣ ಕೊಡಿಸುವ ವ್ಯವಸ್ಥೆಯಾಗಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಅಷ್ಟರೊಳಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಿಯಾ ಯೋಜನೆ ತಯಾರಿಸಿ, ವರದಿ ನೀಡಬೇಕು. ಸರ್ಕಾರ ಯೋಜನೆಗಳನ್ನು ತಲುಪಿಸುವ ಜೊತೆಗೆ ಮಹಿಳೆಯರ ರಕ್ಷಣೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!