
ಕಂಪ್ಲಿ : ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ ತಿಳಿಸಿದರು.
ರಂಜಾನ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಪಟ್ಟಣದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳಿಗೆ ಯುಗಾದಿ ಹಾಗೂ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಪವಿತ್ರ ಹಬ್ಬಗಳಾಗಿವೆ ಎರಡೂ ಹಬ್ಬಗಳನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೇ ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸಬೇಕು ಎಂದರು.
ಹಬ್ಬದ ವೇಳೆ ಯುವಕರು ಸಂಚಾರ ನಿಯಮ ಉಲ್ಲಂಘಿಸದೇ, ನಿಯಮಾನುಸಾರ ವಾಹನ ಚಲಾಯಿಸಬೇಕು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಒಟ್ಟಾರೆ ಹಬ್ಬಗಳು ಶಾಂತಿ, ಸುವ್ಯವಸ್ಥಿತವಾಗಿ, ಸಾಮರಸ್ಯದಿಂದ ಆಚರಿಸಬೇಕೆಂಬುದೇ ಸಭೆಯ ಉದ್ದೇಶ ಎಂದು ಪಿ ಐ ವಾಸುಕುಮಾರ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಂ. ಹೇಮಯ್ಯಸ್ವಾಮಿ, ಎಪಿಎಂಸಿ ಅಧ್ಯಕ್ಷ ಎನ್. ಹಬೀಬಿ ರೆಹಮಾನ್, ಉಸ್ಮಾನ್, ಮಸ್ತಾನವಲಿ ಕಡಪ, ಮೈಮೂದಸಾಬ್, ವಾಹಿದ್ ಸಾಬ್, ಕರೆಕಲ್ ಮನೋಹರ್, ಕೆ.ಎಲಿಗಾರ ನಾಗರಾಜ್, ಮೆಹೆಬೂಬ್, ಸುದರ್ಶನ್ ರೆಡ್ಡಿ ಪತ್ರಯ್ಯಸ್ವಾಮಿ, ಮೌಲಾಹುಸೇನ್, ನಾವಾಬ್ ಸಾಬ್, ಸತ್ಯಪ್ಪ, ಹೊನ್ನೂರಸಾಬ್,
ಸರ್ವ ಧರ್ಮದ ಮುಖ್ಯಸ್ಥರು ಹಾಗೂ ವಿವಿಧ ಸಂಘ
ಸಂಸ್ಥೆಗಳ ಮುಖಂಡರು ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















