ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ.
ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಎರಡು ಶಸ್ತ್ರಚಿಕಿತ್ಸೆಗಳು ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದೆ ಕುಸುಮಾ ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದಾರೆ. ಕುಸುಮಾಳ ಹಠ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಬದ್ಧತೆ ಇದೀಗ ಅನೇಕರಿಗೆ ಸ್ಪೂರ್ತಿಯಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!