ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲ್ಲೂಕಿನಲ್ಲಿ ಸುಸೂತ್ರವಾಗಿ ಜರುಗಿದ ಹತ್ತನೇ ತರಗತಿ ಮೊದಲ ಪರಿಕ್ಷೆ- ಪ್ರಥಮ ದಿನ 55 ವಿದ್ಯಾರ್ಥಿಗಳು ಗೈರು.

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗಳು ಪಟ್ಟಣವೂ ಸೇರಿದಂತೆ ತಾಲ್ಲೂಕಿನ 6 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ಜರುಗಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಹದಿಂದ ಆಗಮಿಸಿದರೆ ತಾಲ್ಲುಕಿನಲ್ಲಿ ಪರೀಕ್ಷೆಗೆ ನೋಂದಾಯಿಸಿದ 1995 ವಿದ್ಯಾರ್ಥಿಗಳಲ್ಲಿ 1940 ವಿದ್ಯಾರ್ಥಿಗಳು ಹಾಜರಾಗಿದ್ದು, 55 ವಿದ್ಯಾರ್ಥಿಗಳು ಗೈರಾಗಿದ್ದರು.
ಕಂಪ್ಲಿ ಪಟ್ಟಣದಲ್ಲಿ ನಾಲ್ಕು ಗ್ರಾಮೀಣ ಪ್ರದೇಶಗಳಾದ ಸುಗ್ಗೇನಹಳ್ಳಿ ಮತ್ತು ಎಮ್ಮಿಗನೂರು ಗ್ರಾಮದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿಸಿದ 333 ವಿದ್ಯಾರ್ಥಿಗಳಲ್ಲಿ 327 ವಿದ್ಯಾರ್ಥಿಗಳು ಹಾಜರಾಗಿದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಕೇಂದ್ರ ಮುಖ್ಯ ಅಧೀಕ್ಷಕರಾದ ಬಸವರಾಜ ಪಾಟೀಲ್ ತಿಳಿಸಿದರು
ಬಾಲಕರ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ ನೋಂದಾಯಿಸಿದ 274 ವಿದ್ಯಾರ್ಥಿಗಳಲ್ಲಿ 264 ವಿದ್ಯಾರ್ಥಿಗಳು ಹಾಜರಾಗಿದ್ದು, 10 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಪರೀಕ್ಷಾ ಕೇಂದ್ರ ಮುಖ್ಯ ಅಧೀಕ್ಷಕಿ ಸುಜಾತಾ ಜತ್ತರ್ ತಿಳಿಸಿದರು. ಓದ್ಸೋ ಜಡೆಮ್ಮ ಗುರುಸಿದ್ದಯ್ಯನವರ ಪ್ರೌಢಶಾಲೆಯ ಕೇಂದ್ರದಲ್ಲಿ ನೋಂದಾಯಿಸಿದ 380 ವಿದ್ಯಾರ್ಥಿಗಳಲ್ಲಿ 374 ವಿದ್ಯಾರ್ಥಿಗಳು ಹಾಜರಾಗಿದ್ದು,6 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಮುಖ್ಯ ಅಧೀಕ್ಷಕಿ ಗಾಯತ್ರಿದೇವಿ ತಿಳಿಸಿದರು.
ವಿಜಯನಗರ ಪ್ರೌಢಶಾಲೆಯ ಕೇಂದ್ರದಲ್ಲಿ ನೋಂದಾಯಿಸಿದ 372 ವಿದ್ಯಾರ್ಥಿಗಳಲ್ಲಿ 365 ವಿದ್ಯಾರ್ಥಿಗಳು ಹಾಜರಾಗಿದ್ದು, 7 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಕೇಂದ್ರ ಮುಖ್ಯ ಅಧೀಕ್ಷಕಿ ನಿರ್ಮಲ ತಿಳಿಸಿದ್ದಾರೆ. ಸುಗ್ಗೇನಹಳ್ಳಿ ಗ್ರಾಮದ ವಿದ್ಯಾಭಾರತಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿಸಿದ 364 ವಿದ್ಯಾರ್ಥಿಗಳಲ್ಲಿ 364 ವಿದ್ಯಾರ್ಥಿಗಳಲ್ಲಿ 345 ವಿದ್ಯಾರ್ಥಿಗಳು ಹಾಜರಾಗಿದ್ದು, 19 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷರಾದ ನಂದಕಿಶೋರ್ ತಿಳಿಸಿದ್ದಾರೆ. ಎಮ್ಮಿಗನೂರು ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿಸಿದ 272 ವಿದ್ಯಾರ್ಥಿಗಳಲ್ಲಿ 265 ವಿದ್ಯಾರ್ಥಿಗಳು ಹಾಜರಾಗಿದ್ದು, 7 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಗಂಗಾಗಧರಯ್ಯ ಜಡಿಮಠ ತಿಳಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞ ಜಾರಿ ಮಾಡಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಆಳವಡಿಸಿದ್ದು, ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆದಿದ್ದು, ಯಾವುದೇ ನಕಲು, ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಗಳು ನಡೆದಿದ್ದು,ಎಲ್ಲಾ ಕೇಂದ್ರಗಳಲ್ಲೂ ವ್ಯಾಕಪ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.ಜೊತೆಗೆ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!