ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುಗಾದಿ ಪಾಡ್ಯದಂದು ವಿಜೃಂಭಣೆಯಿಂದ ಆಂಜನೇಯ್ಯಸ್ವಾಮಿ ಮಹಾರಥೋತ್ಸವ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಹಾಗೂ ಪಟ್ಟಣದ ಮಾರುತಿ ನಗರದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ ಜರುಗಿತು.
ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಆರಂಭಗೊಂಡ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳ ಮುಖಾಂತರ ಎದುರು ಬಸವಣ್ಣವರೆಗೆ ಸಂಚರಿಸಿ ಪುನಃ ದೇವಸ್ಥಾನ ಬಳಿ ಬಂದು ಸಂಪನ್ನಗೊಂಡಿತು.
ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಬಾಳೆಹಣ್ಣು, ಉತ್ತುತ್ತಿ, ಬಿಲ್ವಪತ್ರೆ ಎಸೆಯುವ ಮೂಲಕ ಭಕ್ತಿ ಮೆರೆದರು.
ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕಳಸ, ತಾಷಾರಾಂಡೋಲ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾಪ್ರಕಾರಗಳು ಪಾಲ್ಗೊಂಡಿದ್ದವು. ರಥೋತ್ಸವ ಹಿನ್ನೆಲೆ ಗ್ರಾಮ ಹಾಗೂ ಸುತ್ತಮುತ್ತಲಿನ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಾಯಿ ಕರ್ಪೂರ ಅರ್ಪಿಸಿ ಭಕ್ತಿ ಮೆರೆದರು.
ಈ ರಥೋತ್ಸವದಲ್ಲಿ ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಕಲ ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!