ಬೀದರ್ : ಹೈ.ಕ.ಶಿ ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬಿ ವಿ.ಬಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ದೀಪಾ ರಾಗ ಉದ್ಘಾಟಿಸಿ ಮಾತನಾಡಿ ಸ್ತ್ರೀಯರು ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಸಾಧನೆಯನ್ನು ಮಾಡಿ ಪ್ರತಿಯೊಬ್ಬ ಪುರುಷನ ಹಿಂದೆ ಒಬ್ಬ ಮಹಿಳೆಯ ಶಕ್ತಿ ಇರುತ್ತದೆ
ಎಂದು ಹೇಳಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ಮಲ್ಲಿಕಾರ್ಜುನ ಸಿ ಕನಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯು ಕುಟುಂಬ, ಸಮಾಜ, ವೃತ್ತಿ, ಕೌಶಲ್ಯ, ಸ್ವಾವಲಂಬನೆಯ ಬದುಕನ್ನು ರೂಢಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವನ್ನು ವಹಿಸಿರುತ್ತಾಳೆ ಎಂದರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಯಾದ ಸೈಯದ ಮೊಹತೋಸಿಮ ನಡೆಸಿಕೊಟ್ಟರು. ನಂತರ ಪ್ರಾರ್ಥನ ಗೀತೆಯನ್ನು ವಿದ್ಯಾರ್ಥಿನಿಯಾದ ವೈಷ್ಣವಿ ವಿಜಯಕುಮಾರ್ ಸ್ವಾಗತ ಭಾಷಣವನ್ನು ವಿದ್ಯಾರ್ಥಿನಿಯಾದ ಅನುಪಮ ಹೊಳ್ಳ ಮತ್ತು ವಂದನಾರ್ಪಣೆಯನ್ನು ವಿದ್ಯಾರ್ಥಿನಿಯಾದ ಎಂಜಲೀನಾ ಶೈನಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋದಕೇತರವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು ಕಾಲೇಜಿನ ವಿದ್ಯಾರ್ಥಿನಿಯರಿಂದ ಕರಾಟೆ ಪ್ರದರ್ಶನ, ಭರತನಾಟ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿದವು. ಈ ಸಮಯದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
- ಕರುನಾಡ ಕಂದ ಪತ್ರಿಕೆ




















