ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ ಚಂಪಾ ಶಿವಣ್ಣ ಇನ್ನಿಲ್ಲ

ಮೈಸೂರಿನ ಹಿರಿಯ ಲೇಖಕಿ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಚಂಪಾ ಶಿವಣ್ಣ (71) ಇಂದು ಬೆಳಿಗ್ಗೆ ಅನಾರೋಗ್ಯದ ಕಾರಣದಿಂದಾಗಿ ನಿಧನ ಹೊಂದಿದ್ದಾರೆ. ಇವರು ಮೈಸೂರಿನ ಹಿರಿಯ ಪತ್ರಕರ್ತ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಿ. ಎಂ. ಆರ್. ಶಿವಣ್ಣ ಅವರ ಪತ್ನಿ.

ಸುಮಾರು 25ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದ ಇವರು ತಮ್ಮ ಸಾಹಿತ್ಯ ಸೇವೆಯ ಮೂಲಕ ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಡಾ. ಸಿ ಪಿ ಕೆ, ಡಾ. ಎಚ್ಚೆಸ್ಕೆ, ಡಾ. ಶಿವರುದ್ರಪ್ಪ ಜಿ. ಎಸ್.ಡಾ. ಮಹೇಶ್ ಜೋಶಿ ಮೊದಲಾದವರಿಂದ ಅಪಾರ ಮೆಚ್ಚುಗೆ ಗಳಿಸಿದ್ದರು. ಪುತ್ರಿ ಶ್ರೀಮತಿ ಶಿವರಂಜಿನಿ, ಅಳಿಯ ಪ್ರಹ್ಲಾದರಾವ್, ಮೊಮ್ಮಗ ಪ್ರಥಮ್ ಹಾಗೂ ಅಪಾರ ಸಂಖ್ಯೆಯ ಸಾಹಿತ್ಯಭಿಮಾನಿಗಳನ್ನು ಇವರು ಬಿಟ್ಟು ಅಗಲಿದ್ದಾರೆ.

ಶ್ರೀಮತಿ ಚಂಪಾ ಶಿವಣ್ಣ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿಗಳಾದ ಶ್ರೀಮತಿ ಹೇಮಗಂಗಾ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಭೇರ್ಯ ರಾಮಕುಮಾರ್ ಕಂಬನಿ ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!