ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇವರ ದಾಸಿಮಯ್ಯ ವಚನ ಸಾಹಿತ್ಯಕ್ಕೆ ಪ್ರಥಮವಾಗಿ ಜ್ಯೋತಿ ಹಚ್ಚಿದ ಶರಣ– ಶ್ರೀ ಶ್ರೀ ಯೋಗಿರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು

ಕೊಟ್ಟೂರು : ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಇಂದು ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಶ್ರೀ ಪರಮಪೂಜ್ಯ ಯೋಗಿ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಕೊಟ್ಟೂರು ಕಟ್ಟಿಮನಿ ಹಿರೇಮಠ ಇವರು ವಚನಕಾರರಲ್ಲಿ ಆದ್ಯ ವಚನಕಾರರಾದ ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರಯತ್ನಿಸಿದರು. ಹೆಣ್ಣು-ಗಂಡು ಭೇದವನ್ನು ಎಣಿಸದೇ ಎರಡರಲ್ಲೂ ಇರುವ ಆತ್ಮವು ಒಂದೇ ಎನ್ನುವ ಮೂಲಕ ಸಮಾನತೆಯನ್ನು ತಂದಿದ್ದರು. ಸತಿ-ಪತಿಗಳು ಒಂದಾದ ಭಕ್ತಿ ಹಿತವಾಗಿಪ್ಪುದು ಎನ್ನುವ ಮೂಲಕ ಕೌಟುಂಬಿಕದಲ್ಲಿ ಹೇಗೆ ಬದುಕಬೇಕೆನ್ನುವ ಸಂದೇಶವನ್ನು ನೀಡಿದ್ದಾರೆ. ದೇವಾಂಗ ಸಮುದಾಯಕ್ಕೆ ಸೇರಿದ ಫ. ಗು. ಹಳಕಟ್ಟೆಯವರು ವಚನಗಳನ್ನು ಸಂಗ್ರಹಿಸಿ ಮುದ್ರಿಸಿ ಪ್ರಚಾರ ಮಾಡುವ ಮೂಲಕ ವಚನಕಾರರನ್ನು ಬೆಳಕಿಗೆ ತಂದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಶೀಲ್ದಾರರಾದ ಎಂ. ಪ್ರತಿಭಾ ಇವರು ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಬದುಕು ನಮ್ಮದಾಗುತ್ತದೆ ಎಂದರು.
ಮುಖಂಡರಾದ ರಾಂಪುರ ಬಸವರಾಜ, ಹಳ್ಳಿ ಕೊಟ್ರೇಶ್ ಇವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ದೇವಾಂಗ ಸಮುದಾಯದ ಮುಖಂಡರಾದ ಬಾಚಿನಲ್ಲಿ ಗುರುಬಸವರಾಜ, ಗಂಜಿ ಪ್ರಶಾಂತ, ಬಂಟನಹಳ್ಳಿ ಗುರುಬಸಪ್ಪ, ಮತ್ತಿಹಳ್ಳಿ ಮಂಜಣ್ಣ, ಹರಪನಹಳ್ಳಿ ಅಜ್ಜಪ್ಪ, ಮಾಮನಿ ಕೊಟ್ರೇಶಿ, ಉಪತಹಶೀಲ್ದಾರ್, ಅನ್ನದಾನೇಶ ಬಿ ಪತ್ತಾರ್, ಕಂದಾಯ ನಿರೀಕ್ಷಕ ಡಿ ಶಿವಕುಮಾರ್, ಗ್ರಾಮ ಲೆಕ್ಕಾಧಿಕಾರಿ ಹರೀಶ್ ಹಾಗೂ ಇತರರು ಹಾಜರಿದ್ದರು. ಸಿ. ಮ. ಗುರುಬಸವರಾಜ ಸ್ವಾಗತಿಸಿ ನಿರೂಪಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!