ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಹಳ್ಳಿಯಲ್ಲಿ 11ನೇ ಶತಮಾನದ ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಅದ್ದೂರಿಯಾಗಿ ಭಕ್ತಿ ಭಾವದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿಲ್ಲಿ ಶ್ರೀ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ವಿಶೇಷವಾಗಿ ಶ್ರೀ ಶ್ರೀಮಂತ ಕೆ ಗಂಜಿ ಮುಖ್ಯ ಗುರುಗಳು ರವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದರು.
ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಬೆಳಕನ್ನು ಚೆಲ್ಲುತ್ತದೆ. ವಚನಗಳ ಪಟ್ಟಣದಿಂದ ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ನಮ್ಮ ಜೀವನವನ್ನು ಸಾರ್ಥಕ ಮಾಡಿಕೊಳ್ಳಲಾಗುತ್ತದೆ ಶರಣರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವಚನ ಸಾಹಿತ್ಯಕ್ಕೆ ಭದ್ರ ಅಡಿಪಾಯವನ್ನು ಹಾಕಿದ ದಾಸಿಮಯ್ಯನವರ ರಾಮನಾಥ ಅಂಕಿತನಾಮದ ವಚನಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಶ್ರೀಮಂತ್ ಕೆ ಗಂಜಿ ಮುಖ್ಯ ಗುರುಗಳು ಸರ್ಕಾರಿ ಹಿ ಪ್ರಾ ಶಾ ಕುಡ್ದಹಳ್ಳಿ ಈ ಸಂದರ್ಭದಲ್ಲಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮಂತ್ ಕೆ ಗಂಜಿ ಮುಖ್ಯ ಗುರುಗಳು ಸ. ಹಿ. ಪ್ರಾ. ಶಾ. ಕುಡ್ಹಳ್ಳಿ, ಪ್ರಭಾಕರ್ , ರಮೇಶ್ ದೇವಾನಕರ್ ಎಸ್ ಡಿ ಎಂ ಸಿ ಅಧ್ಯಕ್ಷರು, ಗಿರಿರಾವ್ ರಜಪೂತ ಶಿಕ್ಷಣ ಪ್ರೇಮಿಗಳು, ಶ್ರೀಮತಿ ಭವಾನಿ ಕರನಾಕರ ಎಸ್‌ಡಿಎಂಸಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಮತ್ತು ಪಾಲಕರು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!