ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಚನಗಳು ಮನ ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ : ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ : ವಚನಗಳು ಮನ ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ತಿಳಿವಳಿಕೆಯನ್ನು ಸಹ ಹೆಚ್ಚಿಸುತ್ತವೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ನೇಕಾರ ಸಮುದಾಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ದೇವರದಾಸಿಮಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಯಕತತ್ವ ಪ್ರಚುರಪಡಿಸಿದ ಹನ್ನೆರಡನೇ ಶತಮಾನದ ಶರಣರು ಸಾಮಾಜಿಕ ಪಿಡುಗು ತೊಲಗಿಸಲು ಶ್ರಮಿಸಿದರು. ವಚನಕಾರ ದೇವರದಾಸಿಮಯ್ಯ ತಮ್ಮ ವೈಚಾರಿಕ ನಿಲುವಿನೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ ಎಂದರು.
ದೇವಾಂಗ ಸಮಾಜದ ನಗರ ಘಟಕ ಅಧ್ಯಕ್ಷ ಸಪ್ಪರದ ರಾಘವೇಂದ್ರ ಮಾತನಾಡಿ, ದೇವರ ದಾಸಿಮಯ್ಯ ಪ್ರಪ್ರಥಮ ವಚನಕಾರರಾಗಿದ್ದು, ಆಸೆಗಳನ್ನು ತ್ಯಜಿಸಿ, ಸತ್ಯದ ದಾರಿಯಲ್ಲಿ ನಡೆಯುವುದು ಮುಖ್ಯ ಎಂದು ಅವರು ತಿಳಿಸಿಕೊಟ್ಟಿದ್ದಾರೆ. ಅಂಧಕಾರದಿಂದ ಅಜ್ಞಾನದ ಕಡೆಗೆ ಎಂಬಂತೆ ಅಂದಿನ ಶತಮಾನದಲ್ಲಿಯೇ ಹೋರಾಡಿದ ಹಿರಿಮೆ ದೇವರ ದಾಸಿಮಯ್ಯ ಅವರದ್ದಾಗಿದೆ. ಅವರ ತತ್ವದಾರ್ಶಗಳೊಂದಿಗೆ ಉತ್ತಮ ಜೀವನದ ಕಡೆಗೆ ಸಾಗೋಣ ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರರಾದ ಪಂಪಾಪತಿ, ರಮೇಶ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಮುಖಂಡರಾದ ಪಿ.ಬ್ರಹ್ಮಯ್ಯ, ಜಿ.ಸುಧಾಕರ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳು ಹಾಗೂ ಸಮಾಜದವರು ಪಾಲ್ಗೊಂಡಿದ್ದರು.
ನಂತರ ಪಟ್ಟಣದ ಶ್ರೀ ಬಣ್ಣದ ಚೌಡೇಶ್ವರಿ ದೇವಾಲಯದಲ್ಲಿ ದೇವಾಂಗ ಸಮಾಜದ ನಗರ ಘಟಕ ಅಧ್ಯಕ್ಷ ಸಪ್ಪರದ ರಾಘವೇಂದ್ರ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!