ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ :ಸಂಭ್ರಮದ ರಾಮ ನವಮಿ ಆಚರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ನೆಲ್ಲುಡಿ ಗ್ರಾಪಂಯ ಶಂಕರ್‌ಸಿಂಗ್ ಕ್ಯಾಂಪ್‌ನಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿದವು.
ಇಲ್ಲಿನ ದೇವಾಲಯದಲ್ಲಿ ಸೀತಾ ರಾಮ ಕಲ್ಯಾಣೋತ್ಸವ ಸಂಭ್ರಮದಿಂದ ನಡೆಯಿತು. ನವಮಿ ಅಂಗವಾಗಿ ಬೆಳಿಗ್ಗೆ ಶುದ್ಧಿ ಪೂಜೆಯೊಂದಿಗೆ ಆರಂಭಗೊಂಡು, ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವರಿಗೆ ವಿವಿಧ ಹೂವಿನ ಅಲಂಕಾರ ನಡೆಯಿತು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ಶೇಷಯ್ಯ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದವು. ನಂತರ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶಂಕರ್‌ಸಿಂಗ್ ಕ್ಯಾಂಪ್ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!