ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನ್ನಾರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ ಅಬಕಾರಿ ನಿರೀಕ್ಷಕರಿಗೆ ಮನವಿ.

ಅಧಿಕಾರಿಗಳು ಮತ್ತು ಮದ್ಯ ಮಾರಾಟಗಾರ ನಡುವೆ ಹೊಂದಾಣಿಕೆ ನಡೆಯುತ್ತಿದೆ ನಿರುಪಾದಿ ಕೆ. ಗೋಮರ್ಸಿ ಆರೋಪ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಮತ್ತು ಯುವಕರ ಜೊತೆಗೆ ಕೆ ಆರ್ ಎಸ್ ಪಕ್ಷದ ವತಿಯಿಂದ ಅಬಕಾರಿ ನಿರೀಕ್ಷಕರು ಇವರಿಗೆ ಕನ್ನಾರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹದ ಮನವಿ ಮಾಡಿದರು.

ಮನವಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಮುಖಂಡ ನಿರುಪಾದಿ ಕೆ ಗೋಮರ್ಸಿ ಅವರು ಕನ್ನಾರಿ ಗ್ರಾಮದಲ್ಲಿ ಕೆಲವು ವ್ಯಕ್ತಿಗಳು ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಸತಿ ಪ್ರದೇಶಗಳ ಸಮೀಪ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಊರಿನ ಯುವಕರು, ಕಾರ್ಮಿಕ ವರ್ಗದವರು, ರೈತಾಪಿ ಕೂಲಿಕಾರರು ದಿನ ನಿತ್ಯ ಮದ್ಯ ಸೇವಿಸುವಂತಾಗುತ್ತಿದ್ದು ಇದರಿಂದ ಕುಟುಂಬದಲ್ಲಿ ಕಲಹ, ಸಾರ್ವಜನಿಕ ಅಶಾಂತಿ ಹಾಗೂ ಕಾನೂನು ವ್ಯವಸ್ಥೆಗೆ ಗ್ರಾಮದಲ್ಲಿ ಭಂಗ ಉಂಟಾಗುತ್ತಿದೆ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೊಂದರೆಯಾಗುತ್ತಿದ್ದು ಇದರಿಂದ ಗ್ರಾಮದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಗ್ರಾಮದಲ್ಲಿನ ಈ ಅಕ್ರಮ ಮಧ್ಯ ಮಾರಾಟವು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದ್ದು ಸಮಾಜಕ್ಕೆ ಗಂಭೀರ ಹಾನಿ ಉಂಟು ಮಾಡುತ್ತಿದೆ ಗ್ರಾಮದ ಹಲವು ಅಂಗಡಿ ಮುಂಗಟ್ಟುಗಳಲ್ಲಿ, ಕಿರಾಣಿ ಅಂಗಡಿಗಳಲ್ಲಿ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇದರ ಪರಿಣಾಮ ಮದ್ಯವು ಗ್ರಾಮಸ್ಥರಿಗೆ ಸುಲಭವಾಗಿ ದೊರೆಯುವಂತಾಗುತ್ತಿದೆ, ಆದ್ದರಿಂದ ದಯವಿಟ್ಟು ಸಂಬಂಧಿಸಿದ ಸ್ಥಳಗಳಲ್ಲಿ ತಕ್ಷಣ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನ ಶಿಕ್ಷೆಗೆ ಒಳಪಡಿಸಿ ಸಾರಾಯಿ ಮುಕ್ತ ಕನ್ನಾರಿ ಗ್ರಾಮವನ್ನಾಗಿ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮದ್ಯ ನಿಷೇಧ ಆಂದೋಲನದ ಮುಖ್ಯಸ್ಥೆ ಶ್ರೀಮತಿ ವಿರುಪಮ್ಮ ಉದ್ಭಳ, ಮರಿಯಮ್ಮ,ಇಂದಿರಮ್ಮ,ಶಿವಮ್ಮ,ಈರಮ್ಮ, ನಿರುಪಾದಿ ಕನ್ನಾರಿ, ರೆಡ್ಡಪ್ಪ ಕನ್ನಾರಿ, ಕನ್ನಾರಿ ಗ್ರಾಮದ ಮಹಿಳೆಯರಾದ ಅಲ್ಲಾಬಿ, ಯಂಕಮ್ಮ, ನಾಗಮ್ಮ, ಬಸಮ್ಮ, ರುದ್ರಮ್ಮ,ಹಂಪಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!