ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ:ಪ್ರಾಥಮಿಕ ಆರೋಗ್ಯ ಕೇಂದ್ರ ಸಿರಿಗೇರಿಯ ಅಂಗನವಾಡಿ ಕೇಂದ್ರ ಎರಡರಲ್ಲಿ ಶಾಖಾಘಾತ ನಿರ್ಜಲೀಕರಣ ಚಿಕಿತ್ಸೆ ಮತ್ತು ಪರಿಹಾರ ಕುರಿತು ಗರ್ಭಿಣಿ ಮತ್ತು ಬಾಣಂತಿಯರಿಗೆ ಸಭೆಯನ್ನು ಹಮ್ಮಿಕೊಂಡು ಆರೋಗ್ಯ ಶಿಕ್ಷಣ ನೀಡಲಾಯಿತು

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ರವರು ನಿರ್ಜಲೀಕರಣ ಎಂದರೇನು, ಕಾರಣ ಮತ್ತು ಚಿಕಿತ್ಸಾ ವಿಧಾನ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ನೀರು ಕುಡಿಯುವುದು ಹಣ್ಣುಗಳ ಜ್ಯೂಸ್ ಕುಡಿಯೋದು ತಂಪಿನ ವೇಳೆ ಕೆಲಸ ಮಾಡುವುದು ಸಡಿಲ ಉಡುಪು ತೊಡುವುದು ಮಕ್ಕಳಿಗೆ ಬಿಸಿಲಿನಲ್ಲಿ ಆಡದಂತೆ ನಿರ್ಬಂಧ ಹೇರುವುದು ಮಕ್ಕಳ ಮತ್ತು ವಯೋವೃದ್ಧರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಲಕ್ಷಣಗಳು ಹಾಗೂ ಚಿಕಿತ್ಸೆ ಕುರಿತು ಮತ್ತು ಓ ಆರ್ ಎಸ್ ದ್ರಾವಣ ತಯಾರಿಕಾ ವಿಧಾನವನ್ನು ತಿಳಿಸಿ ಕೊಟ್ಟರು.
ಸಭೆಯಲ್ಲಿ ಮಾತನಾಡಿದ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ಮಕ್ಕಳಲ್ಲಿ ಬೇಸಿಗೆ ಕಾಲದಲ್ಲಿ ದಡಾರ ಪ್ರಕರಣಗಳು ಕಂಡುಬರುವುದು ಸಹಜ ತೀವ್ರತರ ದಡಾರ ರೋಗವನ್ನು ಹೋಗಲಾಡಿಸಲು ಮಕ್ಕಳಿಗೆ ದಡಾರ ಲಸಿಕೆ ನೀಡಲಾಗುತ್ತಿದೆ. ಪ್ರಕರಣಗಳು ಕಂಡುಬಂದ ಕೂಡಲೇ ಆಶಾ ಕಾರ್ಯಕರ್ತರು ತಿಳಿಸುವಂತೆ ಕೋರಿದರು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಶೃತಿ ಹಾಗೂ ಅಂಗನವಾಡಿ ಕಾರ್ಯಕರ್ತ ಸಂಗಮ್ಮ , ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ವರದಿ : ಮಸೀದಿ. ಅಬ್ದುಲ್ ಗೌಸ್. ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!