ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತಿ ಭಾವದಿಂದ ಜರುಗಿದ ಶ್ರೀ ರಾಮಲಿಂಗೇಶ್ವರ ರಥೋತ್ಸವ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಜನಸಾಗರ ಮಧ್ಯೆದಲ್ಲಿಯೆ ಅದ್ದೂರಿಯಾಗಿ ಜರುಗಿತು
ಬೆಳಗಿನ ಜಾವ ಗುಡ್ಡದಲ್ಲಿರುವ ಶ್ರೀ ರಾಮಲಿಂಗೇಶ್ವರ ಮೂರ್ತಿಗೆ ವಿಶೇಷವಾಗಿ ಅಭಿಷೇಕ ಮಾಡಲಾಯಿತು.
ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್ ಅವರ ಮನೆಯಿಂದ ರಥೋತ್ಸವಕ್ಕೆ ಕುಂಭವನ್ನು ಸಮರ್ಪಣೆ ಮಾಡಲಾಯಿತು. ಅವರ ಮನೆಯಿಂದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಕಳಸವನ್ನು ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ, ಪೂಜ್ಯಶ್ರೀ ಮ. ನಿ. ಪ್ರ. ಚಿಕ್ಕ ಗುರು ನಂಜೇಶ್ವರ ಮಹಾಸ್ವಾಮಿಗಳು ಭರತನೂರ್ ಮತ್ತು ಪೂಜ್ಯಶ್ರೀ ಷ .ಬ್ರ ಬಸವಲಿಂಗ ಶಿವಾಚಾರ್ಯರು ಹಿರೇಮಠ ಕೋಡ್ಲಿ ಇವರುಗಳ ಸಾನಿಧ್ಯದಲ್ಲಿ ಶ್ರೀ ರಾಮಲಿಂಗೇಶ್ವರ ರಥೋತ್ಸವ ದಿನಾಂಕ 02 . 04. 2026ರಂದು ಸಾಯಂಕಾಲ 7: 30 ಗಂಟೆಗೆ ತೇರಿಗೆ ಖಾರಿಕ, ಬಾದಾಮಿ, ಉತ್ತತ್ತಿ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತ ಜನ ಸಾಗರ ಮಧ್ಯದಲ್ಲಿಯೆ ಶ್ರೀ ರಾಮಲಿಂಗೇಶ್ವರ ಮಹಾರಾಜ ಕಿ ಜೈ ಎಂಬ ಘೋಷಣೆಯನ್ನು ಕೂಗುತ್ತಾ ಅದ್ದೂರಿಯಾಗಿ ರಥೋತ್ಸವ ಕಾರ್ಯಕ್ರಮವು ಜರುಗಿತು.
ಈ ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್, ರಾಜಕೀಯ ಗಣ್ಯರು, ಊರಿನ ಪ್ರಮುಖರು, ಹಿರಿಯರು, ಯುವಕರು, ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಕೋಡ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!