
ಬೆಳಗಾವಿ/ ಅಥಣಿ: ಪಟ್ಟಣದ ಲಿಡಕರ್ ಕಾಲೋನಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಅಂಗವಾಗಿ ಭವ್ಯ ಸಮಾರಂಭ ನಡೆಯಿತು.
ತಾಲೂಕ ಆಡಳಿತ, ತಾಲೂಕ ಪಂಚಾಯತ್, ಅಥಣಿ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಕಾಣಿಸಿತು.
ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿ ಅವರು ಭಾಗವಹಿಸಿ, ಡಾ. ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಮಾತನಾಡಿದ ಅವರು, “ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿದ್ದು, ಭಾರತದ ಇತಿಹಾಸದಲ್ಲಿ ಅಜರಾಮರ ಸ್ಥಾನ ಪಡೆದ ಮಹಾನ್ ನಾಯಕರು. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಕೃಷಿ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ” ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಉತ್ಪಾದನೆ ಹೆಚ್ಚಿಸಲು ಅವರು ನೀಡಿದ ಕೊಡುಗೆ ಅಪಾರ ರೈತರ ಜೀವನಮಟ್ಟ ಸುಧಾರಣೆಗೆ ಮತ್ತು ದೇಶದ ಆರ್ಥಿಕ ಬಲವರ್ಧನೆಗೆ ಅವರ ಪಾತ್ರ ಅನನ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಥಣಿ ತಾಲೂಕ ದಂಡಾಧಿಕಾರಿಗಳಾದ ಸಿದ್ದರಾಯ್ ಬೋಸಗಿ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ್ ಕಲ್ಲಾಪುರ್ ಸೇರಿದಂತೆ ಪುರಸಭೆಯ ಅಧ್ಯಕ್ಷರಾದ ಶಿವಲೀಲಾ ಬುಟ್ಟಾಳಿ, ಪುರಸಭೆಯ ಉಪಾಧ್ಯಕ್ಷರಾದ ಭುವನೇಶ್ವರಿ ಯಂಕಂಚಿ, ಪುರಸಭೆಯ ಸದಸ್ಯರು ಹಾಗೂ ಯುವ ಮುಖಂಡರಾದ ಕಲ್ಲೇಶ್ ಮಡ್ಡಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಅಥಣಿ ಪುರಸಭೆ ಸದಸ್ಯರು ಹಾಗೂ ಹಿರಿಯ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಜಯಂತಿ ಸಮಾರಂಭವು ಗೌರವ ಮತ್ತು ಸ್ಮರಣೆಯ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.
ವರದಿ. ವಿಠ್ಠಲ ಖೋಕಾಟೆ




















