ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭ್ರಷ್ಟಾಚಾರದ ನಿರ್ಮೂಲನೆಗಾಗಿ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ; ರವಿ ಕೃಷ್ಣಾರೆಡ್ಡಿ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾದ ನಾಗರಾಜ್ ಎಸ್ ಕಲಕುಟಗರ್ ಅವರ ಪರವಾದ ಚುನಾವಣಾ ಪ್ರಚಾರದಲ್ಲಿ ಸೋಮವಾರ ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಅವರು ಬಾಗಲಕೋಟೆ ನಗರದಲ್ಲಿ ಬಹಿರಂಗ ಪ್ರಚಾರ ನಡೆಸಿ ಮಾತನಾಡಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದರು.
ರೈತರ ಸಮಸ್ಯೆಗಳು,ನೀರಾವರಿ ಕೊರತೆ,ಉದ್ಯೋಗದ ಅಭಾವ ಮತ್ತು ಭ್ರಷ್ಟಾಚಾರದ ವಿಷಯಗಳನ್ನು ಉಲ್ಲೇಖಿಸಿ,ಜನರಿಗೆ ಪರ್ಯಾಯ ರಾಜಕೀಯ ಶಕ್ತಿ ಅಗತ್ಯವಿದೆಎಂದು ಹೇಳಿದರು.
“ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದೆ, ರೈತರಿಗೆ ನೀರಾವರಿ ಸೌಲಭ್ಯ,ಯುವಕರಿಗೆ ಉದ್ಯೋಗ ಅವಕಾಶ,ಮಹಿಳೆಯರಿಗೆ ಭದ್ರತೆ ಮತ್ತು ಸಬಲೀಕರಣ ನೀಡಲು ಕೆ ಆರ್ ಎಸ್ ಪಕ್ಷ ಬದ್ಧವಾಗಿದೆ”. ಕಾಂಗ್ರೆಸ್, ಬಿಜೆಪಿ ಪಕ್ಷಗಳು ವಂಶಪಾರಂಪರ್ಯದ ರಾಜಕಾರಣವನ್ನು ಮುಂದುವರೆಸಿಕೊಂಡು ಹಣಬಲ, ಜಾತಿ , ಬಿಟ್ಟಿ ಭಾಗ್ಯಗಳ ಬಲವನ್ನ ಮಾರ್ಗವನ್ನಾಗಿಸಿಕೊಂಡು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿವೆ. ಕ್ಷೇತ್ರದ ಜನರ ಮೇಲೆ ಪ್ರೀತಿ,ವಿಶ್ವಾಸ ಇಲ್ಲದೆ ಇರುವ ಅಭ್ಯರ್ಥಿಗಳು ಚುನಾವಣಾ ಅಕ್ರಮಗಳನ್ನು ನಡೆಸಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಪ್ರತಿನಿತ್ಯ ಅನ್ಯಾಯ,ಅಕ್ರಮ,ಭ್ರಷ್ಟಾಚಾರ ನಡೆಯುತ್ತಿದ್ದು ರೈತರು,ಮಹಿಳೆಯರು, ಕೃಷಿ ಕಾರ್ಮಿಕರು ಸೇರಿದಂತೆ ದಿನನಿತ್ಯ ಹಲವಾರು ಸಾಮಾಜಿಕ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ನಮ್ಮ ಅಭ್ಯರ್ಥಿಯನ್ನ ಬೆಂಬಲಿ ಮತ ನೀಡುವಂತೆ ಕೋರಿದರು. ನಮ್ಮ ಪಕ್ಷದ ಅಭ್ಯರ್ಥಿಯಾದ ನಾಗರಾಜ್ ಕಲಕುಟಗಾರ ಅವರು ಉತ್ತಮ ವಿದ್ಯಾಭ್ಯಾಸವನ್ನು ಹೊಂದಿದವರಾಗಿದ್ದು ಸದಾ ಜನರ ಕುಂದು ಕೊರತೆಗಳಿಗೆ,ಸಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಗುಣವುಳ್ಳವರಾಗಿದ್ದು ಈ ಬಾರಿ ನಮ್ಮ ಅಭ್ಯರ್ಥಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಈ ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ದೀಪಕ್ ಸಿ ಎನ್, ರಾಜ್ಯ ಉಪಾಧ್ಯಕ್ಷರಾದ ಸೋಮಸುಂದರ್, ರಾಜ್ಯ ಕಾರ್ಯದರ್ಶಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿಗಳಾದ ವಿಜಯಕುಮಾರ್ ಯು ಬಿ, ರಾಜ್ಯ ಕಾರ್ಯದರ್ಶಿಗಳಾದ ಜೀವನ್,ಕೃಷ್ಣಾ ವಿ ಬಿ, ಆನಂದ್, ವೀರಭದ್ರಪ್ಪ, ಗಣಪತಿ ರಾಥೋಡ್, ಬಸವನಗೌಡಸಂತೋಷ್ ಹೂಗಾರ್, ಮಹೇಶ್,ನಿಜಾಂ ಜಮಾದಾರ್, ಯಮನಪ್ಪ ಭಗವತಿ, ಮಲ್ಲು ಕಡೆಮನಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!