ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳಿಗೆ ಪ್ಕೋಕ್ಸೋ ಕಾನೂನು ಕುರಿತು ಅರಿವು ಅಗತ್ಯ : ನ್ಯಾಯಾಧೀಶ ಮಹಾಂತೇಶ್ ದರಾಗದ

ಕೊಪ್ಪಳ : ಮಕ್ಕಳಿಗೆ ಪೋಕ್ಸೋ ಕಾನೂನು ಕುರಿತು ಅರಿವು ಅಗತ್ಯವಿದೆ ಎಂದು ಕೊಪ್ಪಳದ ಹಿರಿಯ ಶ್ರೇಣಿ ಸಿವಿಲ್ ನ್ಯಾಯದಿಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಜಿಲ್ಲಾ ವಕೀಲರು ಸಂಘ, ಕೊಪ್ಪಳ ಹಾಗೂ ಕಾಲೇಜಿನ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು -ನೆರವು ಹಾಗೂ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೋಕ್ಸೋ ಕಾಯ್ದೆ ಎಂಬುದು 18 ವರ್ಷದೊಳಗಿನ ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಶೋಷಣೆ ಮತ್ತು ಅಶ್ಲೀಲತೆಯಿಂದ ರಕ್ಷಣೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿದೆ.
ಬಾಲ್ಯ ವಿವಾಹಗಳಿಂದ ಮಹಿಳೆಯರ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಮಹಿಳಾ ಸಹಾಯವಾಣಿದಿಂದ ಬಾಲ್ಯ ವಿವಾಹಗಳನ್ನು ತಡೆಗಟ್ಟಬಹುದು, ಅವಿಭಕ್ತ ಕುಟುಂಬಗಳು ವ್ಯವಸ್ಥೆ ಕಡಿಮೆ ಅಗಿವೆ. ಎಲ್ಲರೂ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಸೌಲಭ್ಯಗಳನ್ನು ಉಪಯೋಗ ಮಾಡಿಕೊಂಡು ಸಬಲೀಕರಣವಾಗಬೇಕು, ಮಹಿಳೆಯರಿಗೆ ಕಾನೂನಿನ ಅರಿವು ಅಗತ್ಯವಿದೆ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಸಾಮಾಜಿಕ ಜವಾಬ್ದಾರಿ ಎಲ್ಲರ ಮೇಲಿದೆ, ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮಗಳು ಬಳಸುವಾಗ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಮಾತನಾಡುತ್ತಾ ಇಂದು ನಮ್ಮ ಸಮಾಜದಲ್ಲಿ ಅವಿಭಕ್ತ ಕುಟುಂಬದ ವ್ಯವಸ್ಥೆ ಕಡಿಮೆ ಆಗಿದೆ. ಇದರ ಪರಿಣಾವಾಗಿ ಇಂದು ವಿಚ್ಛೆದನಗಳು ಹೆಚ್ಚಾಗಿವೆ. ಇಂದು ಕುಟುಂಬಗಳಲ್ಲಿ ಹೊಂದಾಣಿಕೆ ಸ್ವಭಾವ ಕಡಿಮೆ ಇದೆ. ಎಲ್ಲಾ ಮಹಿಳೆಯರು ಶಿಕ್ಷಣ ಪಡೆದು ಅನೋನ್ಯವಾಗಿ ಜೀವನ ಮಾಡಬೇಕು. ಪೋಕ್ಸೋ ಕಾಯ್ದೆಯು ಮಕಳ ಲೈಂಗಿಕ ಶೋಷಣೆ ತಡೆಗಟ್ಟುವ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಹುಲಿಗೆಮ್ಮ, ಡಾ. ನರಸಿಂಹ, ಡಾ. ಗೀತಾ ಮುತ್ತಾಳ, ಡಾ. ಸುಧಾಕರ್, ಅಕ್ಕಮ್ಮ, ಮಾರುತಿ, ಇಮಾಮ್ ಸಾಬು ಹಾಗೂ ಇತರರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!