ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ಶ್ರೀರಾಮರಂಗಾಪುರ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಗುರುವಾರ ಜರುಗಿತು. 80ಕ್ಕೂ ಹೆಚ್ಚು ರೋಗಿಗಳ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ನಡೆಸಿ ಔಷಧ ವಿತರಿಸಲಾಯಿತು.

ಪ್ರಭಾರ ವೈದ್ಯಾಧಿಕಾರಿ ಡಾ. ಗುರುಮುರುಗೇಶ್ ಮಾತನಾಡಿ, ‘ಆಯುರ್ವೇದ ಅನಾದಿ ಕಾಲದಿಂದಲೂ ಜಾಲ್ತಿಯಲ್ಲಿರುವ ಉತ್ತಮ ಚಿಕಿತ್ಸಾ ಪದ್ಧತಿಯಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ, ತಡವಾದರೂ ಶಾಶ್ವತ ಉಪಶಮನ ನೀಡುವ ಶಕ್ತಿ ಆಯುರ್ವೇದಕ್ಕಿದೆ’ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ, ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಕಿಶೋರಿಯರಿಗೆ ಎಚ್‍ಪಿವಿ ಲಸಿಕೆ ಹಾಕಿಸುವಲ್ಲಿ ಪಾಲಕರು ನಿಗಾ ವಹಿಸಬೇಕು ಎಂದರು.

ಆಸ್ಪತ್ರೆ ಸಿಬ್ಬಂದಿ ಗೌರಿ ಶಂಕರ, ಮಲ್ಲಿಕಾರ್ಜುನ, ಮಮತಾ, ಆಶಾ ಕಾರ್ಯಕರ್ತೆ ಅನಿತಾ, ಜ್ಯೋತಿ, ಮಹೇಶ್ವರಮ್ಮ, ಆಯುಷ್ ಇಲಾಖೆ ಸಿಬ್ಬಂದಿ ಆಲ್ತಾಫ್, ರಾಜ ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!