
ಅಯ್ಯನೆರವಂಡ ಪ್ರಿತುನ್ ಪೂವಣ್ಣ ಅವರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ (ರಿ. ) ಸಂಘಟನೆಯ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಶ್ರೀ ಪಿ. ಕೃಷ್ಣೇಗೌಡರ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಯುವಕವಿ/ ವರದಿಗಾರರಾದ ಇವರು ಕಕ್ಕಬ್ಬೆ ನಾಲಡಿ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಸುಪುತ್ರರಾಗಿದ್ದಾರೆ.




















