ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ. 99.71% ಫಲಿತಾಂಶ | ಕಾಲೇಜಿಗೆ 5 ರ‍್ಯಾಂಕ್ ನೊಂದಿಗೆ ಉತ್ತಮ ಸಾಧನೆ.

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾದ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ: ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು- 351, ತೇರ್ಗಡೆಯಾದ ವಿದ್ಯಾರ್ಥಿಗಳು- 350, 209 ಡಿಸ್ಟಿಂಕ್ಷನ್, 137 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 05 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು 99.71% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿರುತ್ತಾರೆ.
ಈ ಸಾಧನೆಯನ್ನು ಮೆಚ್ಚಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಹಾರೈಸಿರುತ್ತಾರೆ.

” ಕಾಲೇಜಿಗೆ 5 ರ‍್ಯಾಂಕ್ ಉತ್ತಮ ಸಾಧನೆ: ಲಕ್ಷ್ಮಿ ಹೆಚ್.ಕೆ. 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 6ನೇ ರ‍್ಯಾಂಕ್ , ಜಿಯಾ ಶೇಟ್ 600 ಕ್ಕೆ 592 ಅಂಕ ಪಡೆದು 7ನೇ ರ‍್ಯಾಂಕ್ , ಫರಿಯಲ್ ಫಾತಿಮ 600 ಕ್ಕೆ 591 ಅಂಕ ಪಡೆದು 8ನೇ ರ‍್ಯಾಂಕ್ ,ತೇಜಶ್ರೀ ಎಸ್. 600 ಕ್ಕೆ 590 ಅಂಕ ಪಡೆದು 9ನೇ ರ‍್ಯಾಂಕ್ ಹಾಗೂ ಅನ್ನಪೂರ್ಣ ಜಿ.ಎಸ್. 600ಕ್ಕೆ 589 ಅಂಕ ಪಡೆದು 10ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ “.

ವರದಿ: ಕೊಡಕ್ಕಲ್ ಶಿವಪ್ರಸಾದ್ , ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!