ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲೆ ಕೊಣೆಯೊಳಗೆ ಗಣಿತ ಶಿಕ್ಷಕನ ಕಾಮದಾಟ

ಚಿತ್ರದುರ್ಗ : ದೈವ ಸ್ವರೂಪಿ ಎನಿಸಿದ್ದ ಶಿಕ್ಷಕರು ಶಿಶು ಕಾಮುಕರಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರೇ ಬಾಲಕಿಯರ ಮೇಲೆ ಬಲತ್ಕಾರಕ್ಕೆ ಯತ್ನಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ಪಡುವಂತಾಗಿದೆ. ಒಂದು ಕಾಲದಲ್ಲಿ ಮಕ್ಕಳು ಶಾಲೆಗೆ ಹೋದರೆ ಸುರಕ್ಷಿತವಾಗಿರುತ್ತಾರೆ ಎಂಬ ಭಾವನೆಯಿತ್ತು. ಇದೀಗ ಶಾಲಾ ವಿದ್ಯಾರ್ಥಿನಿಯರ ಮೇಲೆ ಶಾಲಾ ಕೊಠಡಿಯೊಳಗೆ ಶಿಕ್ಷಕರಿಂದಲೇ ಬಲತ್ಕಾರ ನಡೆಯುತ್ತಿರುವುದು ಆಘಾತಕಾರಿಯಾಗಿದೆ. ಅದಕ್ಕೆ ಇಂಬು ಕೊಡುವಂತೆ ಚಿತ್ರದುರ್ಗದಲ್ಲಿ ಮತ್ತೊಂದು ಪೋಕ್ಸೊ ಪ್ರಕರಣ ಬೆಳಕಿಗೆ ಬಂದಿದೆ.

ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿ
ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿಯಾದ ಘನಘೋರ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬೆಳಕಿಗೆ ಬಂದಿದೆ. 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಪುಸಲಾಯಿಸಿ ಅದೇ ಶಾಲೆಯ ಶಿಕ್ಷಕನೊಬ್ಬ ಬಲತ್ಕಾರ ಎಸಗಿದ್ದು ಇದರ ಪರಿಣಾಮ ವಿದ್ಯಾರ್ಥಿನಿ ಗರ್ಭವತಿಯಾಗಿದ್ದಾಳೆ ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ವಿದ್ಯಾರ್ಥಿನಿಯೊಂದಿಗೆ ಗಣಿತ ಶಿಕ್ಷಕನ ಕಾಮದಾಟ:

ಚಳ್ಳಕೆರೆ ವ್ಯಾಪ್ತಿಯಲ್ಲಿ ಬರುವ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ಹೆಚ್.ಓ. ರಾಜಣ್ಣ ಎಂಬಾತನೇ ಈ ಕೃತ್ಯವೆಸಗಿದ ಆರೋಪಿ. ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಬಾಲಕಿ ಗರ್ಭ ಧರಿಸಿದ್ದಳು ಎನ್ನಲಾಗಿದೆ. ಪೋಷಕರಿಗೆ ತಿಳಿದರೆ ಸಮಸ್ಯೆ ಎಂದರಿತು ಆರೋಪಿ ಶಿಕ್ಷಕ ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ.

ಬಾಲಕಿ ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆಯೇ ವಿಷಯ ಮುಚ್ಚಿಹಾಕಲು ಆರೋಪಿ ಶಿಕ್ಷಕ ಯತ್ನಿಸಿದ್ದಾನೆ. ಮೊದಲೇ ಪ್ಲಾನ್ ಮಾಡಿಕೊಂಡಂತೆ ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಹೋಮ್‌ನ ವೈದ್ಯೆ ಶಂಕರಲಕ್ಷ್ಮೀ ಎಂಬುವವರ ಬಳಿ ಈ ವಿಷಯ ಮಾತಾಡಿ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು:

ವಿಷಯ ತಿಳಿದ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಕಾಮುಕ ಶಿಕ್ಷಕ ರಾಜಣ್ಣ ಹಾಗೂ ಸಹಕರಿಸಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಪೋಷಕರಲ್ಲಿ ಹೆಚ್ಚಿದ ಆತಂಕ:

ಗುರುಗಳಂತೆ ಕಾಣುವ ಇಂಥ ಶಿಕ್ಷಕರೇ ಶಿಶುಕಾಮುಕರಾಗಿ ಬದಲಾಗುತ್ತಿರುವುದು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಶಾಲೆಗೆ ಹೋದರೆ ಮಕ್ಕಳು ಸುರಕ್ಷಿತ ಎಂಬ ಪೋಷಕರ ನಂಬಿಕೆಗೆ ಈ ಘಟನೆ ದೊಡ್ಡ ಪೆಟ್ಟು ನೀಡಿದ್ದು, ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್ , ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!