ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಮಹಾತ್ಮಾ ಜ್ಯೋತಿಬಾ ಫುಲೆ ಜಯಂತಿ ಸಂಭ್ರಮ.

ಬೆಳಗಾವಿ: ಅಥಣಿ ಪಟ್ಟಣದಲ್ಲಿ ಸಾಮಾಜಿಕ ಕ್ರಾಂತಿಯ ದೀಪವಾಗಿದ್ದ ಮಹಾತ್ಮಾ ಶ್ರೀ ಜ್ಯೋತಿಬಾ ಫುಲೆ ಅವರ 199ನೇ ಜಯಂತಿಯನ್ನು ಅತ್ಯಂತ ಗೌರವದಿಂದ ಮತ್ತು ಭಕ್ತಿಭಾವದಿಂದ ಆಚರಿಸಲಾಯಿತು.

ಈ ವಿಶೇಷ ಸಂದರ್ಭದಲ್ಲಿ, ಪಟ್ಟಣದ ಶ್ರೀ ಬಸವೇಶ್ವರ ವೃತ್ತದಿಂದ ಜತ್ತ ರಸ್ತೆಯವರೆಗೆ ಇರುವ ರಸ್ತೆಗೆ “ಶ್ರೀ ಜ್ಯೋತಿಬಾ ಫುಲೆ ಮಾರ್ಗ” ಎಂದು ನಾಮಕರಣ ಮಾಡಲಾಗಿದ್ದು, ಅದರ ಫಲಕವನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ಉದ್ಘಾಟಿಸಿ ಮಾತನಾಡಿ ಮಹಾತ್ಮಾ ಫುಲೆ ಅವರ ಸಮಾಜಮುಖಿ ಚಿಂತನೆಗಳು, ಶಿಕ್ಷಣದ ಮಹತ್ವ ಮತ್ತು ಸಮಾನತೆಯ ಸಂದೇಶ ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ ಎಂದು ಹೇಳಿದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಕಾಲದ ಅವಶ್ಯಕತೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪ. ಪೂ. ಶ್ರೀ ಮರುಳಸಿದ್ಧ ಮಹಾಸ್ವಾಮಿಗಳು, ಅಥಣಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟ್ಟಾಳಿ, ಕಾಂಗ್ರೆಸ್ ಮುಖಂಡರಾದ ಶ್ರೀ ಸದಾಶಿವ್ ಬುಟ್ಟಾಳಿ, ಗಿರೀಶ್ ದಿವಾನಮಳ, ಶ್ರೀಶೈಲ ಹಳ್ಳದಮಳ, ಪುರಸಭೆ ಸದಸ್ಯರು, ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜ್ಯೋತಿಬಾ ಫುಲೆ ಅವರ ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಸ್ಮರಿಸುತ್ತಾ, ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!