ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಸ್ತು, ನಾಯಕತ್ವ ಹಾಗೂ ಸಹಕಾರ ಗುಣ ಬೆಳೆಸುವ ವೇದಿಕೆ : ಜಡೇಶ ತಾತ

ಬಳ್ಳಾರಿ / ಕಂಪ್ಲಿ: ಎನ್‌ಎಸ್‌ಎಸ್ ಕೇವಲ ಒಂದು ಶಿಬಿರವಲ್ಲ. ಅದು ವಿದ್ಯಾರ್ಥಿನಿಯರಿಗೆ ಶಿಸ್ತು, ನಾಯಕತ್ವ ಹಾಗೂ ಸಹಕಾರ ಗುಣಗಳನ್ನು ಬೆಳೆಸುವ ವೇದಿಕೆಯಾಗಿದೆ’ ಎಂದು ಹೆಚ್.ವೀರಾಪುರದ ಜ್ಙಾನ ಜೋತಿ ಶಿವಲಿಂಗ ಮಠದ ಜಡೇಶ ತಾತ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಎಮ್ಮಿಗನೂರು ಗ್ರಾಮದ ಜಡೇಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಕಂಪ್ಲಿ ವಿನೂತನ ಕಲಾ ಮತ್ತು ವಾಣಿಜ್ಯ ಪದವಿ ಮಹಿಳಾ ವಿದ್ಯಾಲಯದವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ (ಎನ್‌ಎಸ್‌ಎಸ್) ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜದ ಸಮಸ್ಯೆಗಳತ್ತ ಗಮನಹರಿಸಿ, ಅವುಗಳನ್ನು ಪರಿಹರಿಸುವಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳಲ್ಲಿ ಕೂಡಿ ಬಾಳುವ ಸಂಸ್ಕೃತಿ, ಸಂಸ್ಕಾರ, ಪರಿಪೂರ್ಣ ವ್ಯಕ್ತಿತ್ವಕ್ಕೆ ನಿರ್ಮಾಣಕ್ಕೆ ಶಿಬಿರ ಪ್ರಯೋಜನಕಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಶ್ರದ್ಧೆಯಿಂದ ಶಿಬಿರದಲ್ಲಿ ಪಾಲ್ಗೊಂಡು ಶ್ರಮದಾನದಲ್ಲಿ ತೊಡಗಬೇಕು’ ಎಂದು ತಿಳಿಸಿದರು.
ಸಮಾಜ ಸೇವಕ ಕನಕಪ್ಪ ಸುಣಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸದ ಜೊತೆಗೆ ಒಳ್ಳೆಯ ನಾಯಕತ್ವ ಗುಣಗಳು ಬೆಳೆಯಲು ಸಾಧ್ಯ.
ವಿನೂತನ ಕಲಾ ಮತ್ತು ವಾಣಿಜ್ಯ ಕಾಲೇಜು ಪ್ರಾರ್ಚಾಯ ಮದ್ದಾನೆಪ್ಪ ಬಿಡನಾಳ ಮಾತನಾಡಿ, ಸಂಸ್ಥೆಯ ಅಡಿಯಲ್ಲಿ ಕಾಲೇಜು ವತಿಯಿಂದ ಹಲವಾರು ಸಮಾಜ ಮುಖಿ ಕಾರ್ಯಗಳು ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರಗಳನ್ನು ಸದುಪಯೋಗಪಡೆದುಕೊಳ್ಳಬೇಕು ಎಚಿದರು.
ವಿದ್ಯಾರ್ಥಿಗಳಿಗೆ ಶಿಬಿರದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಮಹಾಬಲೇಶ್ವರಪ್ಪ, ಎಮ್ಮಿಗನೂರು ಕಾಲೇಜು ಪ್ರಾಚಾರ್ಯ ಕೆ.ಬಿ.ವಿರೇಶ, ಉಪಾನ್ಯಾಸಕಿ ಸುನೀತಾ, ಮುಖಂಡರಾದ ಚೆನ್ನವೀರಯ್ಯ ಸ್ವಾಮಿ, ಎಸ್.ರಾಮಪ್ಪ, ಪಂಪಾಪತಿ, ಸಂಸ್ಥೆಯ ಬೋಧಕ ವೃಂದದರಾದ ಜಡಪ್ಪ, ಲಕ್ಷ್ಮಣ, ಮೇಘರಾಜ, ಗೋಪಾಲ, ಚಾನಾಳ್ ಸೇರಿದಂತೆ ವಿದ್ಯಾರ್ಥಿನಿಯರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!