ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದ್ವಿತೀಯ ಪಿಯುಸಿ ಫಲಿತಾಂಶ :ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದ ಎಮ್. ಎಮ್. ಎಸ್. ಎ. ಪದವಿ ಪೂರ್ವ ಕಾಲೇಜು

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಕ್ರಾಸಿನಲ್ಲಿರುವ ಕುವೆಂಪು ವಿದ್ಯಾಸಂಸ್ಥೆಯ ಎಮ್. ಎಮ್. ಎಸ್. ಎ ಪದವಿ ಪೂರ್ವ ಕಾಲೇಜು ಈ ವರ್ಷದ ಪಿಯುಸಿ ಫಲಿತಾಂಶಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ೯೬ ವಿದ್ಯಾರ್ಥಿಗಳು ಶೇ ೧೦೦ ಫಲಿತಾಂಶ ಸಾಧಿಸಿದ್ದು, ಒಬ್ಬರೂ ಅನುತ್ತೀರ್ಣರಾಗಿಲ್ಲವೆಂಬುದು ವಿಶೇಷವಾಗಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸುಧಾ ವಜ್ಜಲ ೯೭% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಸಲ್ಮಾ ಶೇಖ್ ೯೭% ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಸೋಪಿಸಾಬ್ ೯೬% ಅಂಕಗಳೊಂದಿಗೆ ತೃತೀಯ ಸ್ಥಾನ ತೆಗೆದುಕೊಂಡಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಅಭಿಷೇಕ್ ಬಿರಾದಾರ್ ೯೬% ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ, ವಿನಯ್ ತಿವಾರಿ ೯೪.೧೬% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಪ್ರಿಯಾಂಕ ಪಟೇದಾರ್ ೯೩.೧೬% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಅಕ್ಷತಾ ಸಜ್ಜನ್ ೮೯ % ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಬ್ದುಲ್ ಮಜೀದ್ ೮೪% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಭರತ್ ಕುಮಾರ್ ಮದರಿಮಠ ೮೪% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ವರದಿ ಸಂಗಮೇಶ ಸಿ.ಚೌದ್ರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!