ಕೊಡಗು :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ಕವನ ವಾಚನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯು ವಿರಾಜಪೇಟೆ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಒಂದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಕವನದ ರಚನೆಕಾರರ ಹೆಸರಿನೊಂದಿಗೆ ಅಥವ ಸ್ವರಚಿತ ಕವನಗಳನ್ನು 3 ನಿಮಿಷದ ಒಳಗಾಗಿ ವಾಚನ ಮಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು, ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರ ವಾಟ್ಸಾಪ್ ಸಂಖ್ಯೆ 9611478539ಗೆ ದಿ. 30/04/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗುವುದು, ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿರಾಜಪೇಟೆ ತಾಲೂಕು ಅಧ್ಯಕ್ಷರಾದ, ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಪ್ರಿತುನ್ ಪೂವಣ್ಣ




















