ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಂಸಿಯಲ್ಲಿ ಕುವೆಂಪು ಬಿಇಡಿ ಕಾಲೇಜ್‌ನ ಎನ್‌ಎಸ್‌ಎಸ್ ಶಿಬಿರ ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಿ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ತಿಳಿಸಿದರು. ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಏ.17ರಿಂದ 23ರವರೆಗೆ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಏ.17ರ ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಓದು, ಬರಹ ಕಲಿಸಿ ಪುಸ್ತಕದ ಜ್ಞಾನ ನೀಡುತ್ತದೆ. ಪಠ್ಯ ಶಿಕ್ಷಣ ಜತೆ ಸಮುದಾಯದ ಪರಿಚಯ, ಸೇವೆ, ಸಾಮಾಜಿಕ ಜವಾಬ್ದಾರಿ, ಕಲೆ, ಸಂಸ್ಕೃತಿಯ ಅರಿವು, ಸಹ ಭೋಜನ, ಸಹಭಾಗಿತ್ವ, ಸೌಹಾರ್ದತೆಯನ್ನು ಎನ್ ಎಸ್ ಎಸ್‌ನಿಂದ ಕಲಿಯಬಹಾದ ಸಮಗ್ರತೆಯ ಪರಿಕಲ್ಪನೆಯ ಸಾಕಾರಕ್ಕಾಗಿ ನಡೆಯುವ ಎನ್‌ ಎಸ್‌ ಎಸ್ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಶಿಕ್ಷಣದ ಮೂಲ ಉದ್ದೇಶವೇ ಸಾಮಾಜಿಕ ಒಳಿತು ಮತ್ತು ಮಾನವೀಯತೆಯ ಬದುಕನ್ನು ಕಟ್ಟಿಕೊಳ್ಳಲು ಅವಶ್ಯವಾದ ಜ್ಞಾನವನ್ನು ನೀಡುವುದಾಗಿದೆ. ಶಿಕ್ಷಣದ ಮೌಲ್ಯಗಳು ಸಾಮಾಜಿಕ ಪರಿವರ್ತನೆಯ ದೊಡ್ಡ ಸಾಧನವಾಗಿವೆ ಎಂದರು. ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್ ಗೌಡ ಮಾತನಾಡಿ ಕಲಿಕೆ ವಿದ್ಯಾರ್ಥಿ, ಶಿಕ್ಷಕರ ನಡುವಿನ ಕೊಂಡಿ ಅಷ್ಟೇ ಅಲ್ಲದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬಂಧ ಏರ್ಪಡಬೇಕು ಎನ್ನುವ ಆಶಯದೊಂದಿಗೆ ಎನ್‌ಎಸ್‌ಎಸ್ ಶಿಬಿರ ನಡೆಸಲಾಗುತ್ತದೆ. ಗ್ರಾಮದ ಸ್ವಚ್ಛತೆ, ಕೆಲಸದ ಜತೆ ಗ್ರಾಮೀಣರಲ್ಲಿ ಆರೋಗ್ಯ ಅರಿವು, ಮೌಢ್ಯತೆ ಹೋಗಲಾಡಿಸುವುದು, ಕಂದಾಚಾರಕ್ಕೆ ವಿರುದ್ಧವಾಗಿ ಯುವಕರ ಪ್ರೇರಣೆ ಹೀಗೆ ಹಲವು ಮಾರ್ಗದಲ್ಲಿ ಯುವ ಜನತೆ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್. ಅಶಿತ್, ಹೆಚ್.ಬಿ. ರಾಮಣ್ಣ ಹರಳೆಣ್ಣೆ, ಕೆ.ಆರ್. ಸಂಜೀವಪ್ಪ, ರಾಜೇಶ್ವರಿ ತಿಮ್ಮೇಶ್, ಗಿರೀಶ್ ಸ್ವಾಮಿ, ಜಿಪಂ ಮಾಜಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಎಸ್. ನಾಗರಾಜ್, ಕುವೆಂಪು ಕನ್ನಡ ಸಂಘದ ಅಧ್ಯಕ್ಷ ಸತೀಶ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಧು ಜಿ., ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಎನ್.ಜೆ. ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು. ರಮ್ಯಾ ಮತ್ತು ತಂಡ ಪ್ರಾರ್ಥಿಸಿ, ಡಾ. ಮಧು ಜಿ. ಸ್ವಾಗತಿಸಿ, ಪ್ರಶಿಕ್ಷಣಾರ್ಥಿಗಳಾದ ಚಂದನ ಕೆ. ನಿರೂಪಿಸಿ, ಸೃಷ್ಟಿ ವಂದಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಬೆಂಗಳೂರು/ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!