ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯೋಧನಿಗೆ ಗಂಭೀರ ಗಾಯ: ಪ್ಯಾರಾಚೂಟ್ ತರಬೇತಿ ವೇಳೆ ಅನಾಹುತ

ಬಳ್ಳಾರಿ : ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರ ವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡ ಪ್ಯಾರಾಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು. ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆ ಅಥವಾ ಆಯತಪ್ಪಿದ ಕಾರಣ ಸುಮಾರು 50 ಅಡಿ ಎತ್ತರದಿಂದ ನೇರವಾಗಿ ನೆಲಕ್ಕೆ ಬಿದ್ದಿದ್ದಾರೆ. ಘಟನೆಯ ತೀವ್ರತೆಗೆ ಅವರ ಕಾಲಿನ ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಏರ್‌ಲಿಫ್ಟ್ :

ಗಾಯಗೊಂಡ ಸೈನಿಕನನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಅದರಂತೆ ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಯೋಧನನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!